janadhvani

Kannada Online News Paper

ಸೌದಿ ಅರೇಬಿಯಾದ ಮಸೀದಿಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯ

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವಾಲಯದ ನಿರ್ದೇಶನದಂತೆ ಕೋವಿಡ್ ಪ್ರೋಟೋಕಾಲ್‌ಗಳನ್ನು ಮರು ಜಾರಿಗೊಳಿಸಲಾಗುತ್ತಿದೆ.

ರಿಯಾದ್: ಸೌದಿ ಅರೇಬಿಯಾದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವಾಲಯದ ನಿರ್ದೇಶನದಂತೆ ಕೋವಿಡ್ ಪ್ರೋಟೋಕಾಲ್‌ಗಳನ್ನು ಮರು ಜಾರಿಗೊಳಿಸಲಾಗುತ್ತಿದೆ.

ದೇಶಾದ್ಯಂತ ಮಸೀದಿಗಳಲ್ಲಿ ಪ್ರಾರ್ಥನೆ ನಡೆಸಲು ಆಗಮಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಪರಸ್ಪರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಸೌದಿ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯವು ದೇಶದ ಎಲ್ಲಾ ಭಾಗಗಳಲ್ಲಿನ ಸಚಿವಾಲಯದ ಶಾಖೆಗಳಿಗೆ ವಿಷಯವನ್ನು ವಿವರಿಸುವ ಸುತ್ತೋಲೆಯನ್ನು ಕಳುಹಿಸಿದೆ.