ನವದೆಹಲಿ: ಹರಿದ್ವಾರ ಮತ್ತು ದೆಹಲಿಯಲ್ಲಿ ನವೆಂಬರ್ 17 ಮತ್ತು 19 ರಂದು ನಡೆದ ‘ಧರ್ಮ ಸಂಸದ್’ ಕಾರ್ಯಕ್ರಮದಲ್ಲಿ ಮಾಡಿದ ಉದ್ರೇಕಕಾರಿ ದ್ವೇಷ ಭಾಷಣಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಸುಪ್ರೀಂಕೋರ್ಟ್‌ನ 76 ಹಿರಿಯ ವಕೀಲರು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸುಪ್ರೀಂಕೋರ್ಟ್‌ನ 76 ವಕೀಲರು ಸಿಜೆಐ ಎನ್.ವಿ.ರಮಣ ಅವರಿಗೆ ಪತ್ರ ಬರೆದು, ದೆಹಲಿ ಮತ್ತು ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಎರಡು ಧಾರ್ಮಿಕ ಕಾರ್ಯಕ್ರಮಗಳಲ್ಲಿ ‘ಜನಾಂಗೀಯ ಹತ್ಯಾಕಾಂಡ’ದ ಕರೆ ನೀಡಿದ್ದು, ಈ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದಾರೆ.
ಸನಾತನ ಧರ್ಮದ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಹರಿದ್ವಾರದ ವೇದ ನಿಕೇತನ ಧಾಮದಲ್ಲಿ ಜುನಾ ಅಖಾಡದ ಮಹಾಮಂಡಲೇಶ್ವರ ಸ್ವಾಮಿ ಯತಿ ನರಸಿಂಹಾನಂದ ಗಿರಿ ಅವರ ನೇತೃತ್ವದಲ್ಲಿ ಮೂರು ದಿನಗಳ ‘ಧರ್ಮ ಸಂಸದ್’ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೆಹಲಿಯಲ್ಲಿ ಸಹ ಹಿಂದೂ ಯುವ ವಾಹಿನಿ ಇದೇ ರೀತಿಯ ಕಾರ್ಯಕ್ರಮ ಆಯೋಜಿಸಿತ್ತು. ಈ ವೇಳೆ ದ್ವೇಷದ ಭಾಷಣ ಮಾಡಿದ್ದಲ್ಲದೇ, ಸಮುದಾಯವೊಂದರ ಹತ್ಯೆಗೆ ಮುಕ್ತ ಕರೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಎರಡೂ ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಲಾಗಿದೆ. ದೇಶದಲ್ಲಿ ಶಾಂತಿ ಕದಡುವ ಕೆಲಸ ಮಾಡಲಾಗುತ್ತಿದೆ. ಇದು ದೇಶದ ಏಕತೆ ಮತ್ತು ಸಮಗ್ರತೆಗೆ ಗಂಭೀರ ಬೆದರಿಕೆ ಉಂಟುಮಾಡುತ್ತದೆ ಎಂದು ಸುಪ್ರೀಂಕೋರ್ಟ್ ವಕೀಲರು ಕಳವಳ ವ್ಯಕ್ತಪಡಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಭಾರತೀಯ ದಂಡ ಸಂಹಿತೆ 1860ರ ಸೆಕ್ಷನ್ 120ಬಿ, 121ಎ, 153ಎ, 153ಬಿ, 295ಎ ಮತ್ತು 298ರ ಅಡಿಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಜೆಐಗೆ ನಿರ್ದೇಶನ ನೀಡಬೇಕು ಅನ್ನೋದು ವಕೀಲರ ಆಗ್ರಹವಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ