ಬೆಳಗಾವಿ, ಡಿ. 29:ಕರ್ನಾಟಕದಲ್ಲಿ ಡಿ.31 ರಂದು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ನಡೆದೇ ನಡೆಯುತ್ತದೆ. ಸಾರ್ವಜನಿಕರು ಸಹಕಾರ ನೀಡಬೇಕೆಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.
ಬುಧವಾರ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು, ಸರಕಾರ ಸಚಿವ ಸಂಪುಟ ಸಭೆಯಲ್ಲಿ ಎಂಇಎಸ್(ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧ ಮಾಡುವ ಸ್ಪಷ್ಟ ನಿರ್ಣಯ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಡಿಸೆಂಬರ್ 31 ರಂದು ಸೂರ್ಯ-ಚಂದ್ರರ ಜಾಗ ಬದಲಾದರೂ ಬಂದ್ ನಿಲ್ಲುವುದಿಲ್ಲ. ರಾಜ್ಯ ಸರಕಾರ ಎಂಇಎಸ್ ನಿಷೇಧ ಮಾಡಲು ಸಚಿವ ಸಂಪುಟದಲ್ಲಿ ನಿರ್ಧಾರ ಮಾಡಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಿತ್ತು. ಆದರೆ ಈ ತೀರ್ಮಾನ ಮಾಡದ ಹಿನ್ನೆಲೆಯಲ್ಲಿ ಬಂದ್ ಕರೆ ನೀಡಲಾಗಿದೆ ಎಂದರು.
ಬೆಳಗಾವಿಯಲ್ಲಿ ಎಂಇಎಸ್ ಇರಲೇಬಾರದು. ರಾಜ್ಯೋತ್ಸವ ದಿನ ಕರಾಳ ದಿನ, ಅಧಿವೇಶನ ಸಂದರ್ಭದಲ್ಲಿ ಮಹಾಮೇಳ ನಡೆಸುತ್ತದೆ. ರಾಯಣ್ಣನ ಮೂರ್ತಿಗೆ ಅಪಮಾನ, ಕನ್ನಡ ಧ್ವಜ ಸುಡುವ ಪುಂಡ ಸಂಘಟನೆಯ ಅಸ್ತಿತ್ವ ಬೆಳಗಾವಿಯಲ್ಲಿ ಇರಬಾರದು ಎಂದರು.
ಕರ್ನಾಟಕ ಬಂದ್ ಕರೆಕೊಟ್ಟ ಉದ್ದೇಶ ಮುಖ್ಯವಾಗುತ್ತದೆ. ಡಿಸೆಂಬರ್31 ರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆ ವರೆಗೂ ಬಂದ್ ನಡೆಯಲಿದೆ ಎಂದರು. ಅಶೋಕ ಚಂದರಗಿ ಬಣದ ವಿರೋಧ ವಿಚಾರಕ್ಕೆ ಉತ್ತರಿಸಿದ ಅವರು, ಅಶೋಕ ಚಂದರಗಿ ಅವರನ್ನು ನಾನು ಎಂದಿಗೂ ಪರಿಗಣಿಸಿಯೇ ಇಲ್ಲ ಎಂದರು.
ಕನ್ನಡಪರ ಸಂಘಟನೆಗಳ ಹೋರಾಟಗಾರರಾದ ರಾಜು ಕೋಲಾ, ವಾಜೀದ ಹಿರೇಕುಡಿ, ಈರಣ್ಣಾ ಜೊಣ್ಣದ ಸೇರಿದಂತೆ ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ