ರಿಯಾದ್: ವಲಸಿಗರ ಪ್ರಯಾಣ ಸಮಸ್ಯೆಯನ್ನು ಪರಿಹರಿಸಲು ಭಾರತ-ಸೌದಿ ಏರ್ ಬಬಲ್ ಒಪ್ಪಂದ ಇಂದಿನಿಂದ ಜಾರಿಗೆ ಬಂದಿದೆ. ರಾಜ್ಯದ ಬೆಂಗಳೂರು ಸೇರಿದಂತೆ ಕೇರಳದ, ಕೋಝಿಕ್ಕೋಡ್ ಮತ್ತು ಕೊಚ್ಚಿ ಸಹಿತ ಭಾರತದ ಎಂಟು ವಿಮಾನ ನಿಲ್ದಾಣಗಳಿಗೆ ಮತ್ತು ಸೌದಿ ಅರೇಬಿಯಾದ ನಾಲ್ಕು ವಿಮಾನ ನಿಲ್ದಾಣಗಳಿಗೆ ಶೀಘ್ರದಲ್ಲೇ ವಿಮಾನಗಳನ್ನು ಪ್ರಾರಂಭಿಸಲಾಗುವುದು ಎಂದು ಭಾರತೀಯ ರಾಯಭಾರಿ ಅವ್ಸಾಫ್ ಸಯೀದ್ ರಿಯಾದ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸೌದಿಯಿಂದ ಕೋಝಿಕ್ಕೋಡ್, ಕೊಚ್ಚಿ, ಚೆನ್ನೈ, ಬೆಂಗಳೂರು, ಹೈದರಾಬಾದ್, ಲಕ್ನೋ, ಮುಂಬೈ ಮತ್ತು ದೆಹಲಿ ವಿಮಾನ ನಿಲ್ದಾಣಗಳಿಗೆ ಈ ಸೇವೆ ಲಭ್ಯವಿದೆ.
ಭಾರತದಿಂದ ರಿಯಾದ್, ಜಿದ್ದಾ , ಮದೀನಾ ಮತ್ತು ದಮ್ಮಾಮ್ ವಿಮಾನ ನಿಲ್ದಾಣಗಳಿಗೆ ವಿಮಾನಯಾನ ಇರಲಿದೆ. ಸೇವೆಯನ್ನು ಯಾವಾಗಿನಿಂದ ಪ್ರಾರಂಭಿಸಲಿದ್ದಾರೆ ಎಂಬುದನ್ನು ಸೌದಿ ಮತ್ತು ಭಾರತೀಯ ನಾಗರಿಕ ವಿಮಾನಯಾನ ಅಧಿಕಾರಿಗಳು ಶೀಘ್ರದಲ್ಲೇ ನಿರ್ಧರಿಸಲಿದ್ದಾರೆ. ಸೌದಿ ಅರೇಬಿಯಾಕ್ಕೆ ಆಗಮಿಸುವ ಪ್ರಯಾಣಿಕರು ಹೋಟೆಲ್ ಕ್ವಾರಂಟೈನ್ ಸೇರಿದಂತೆ ಕೆಲವು ಷರತ್ತುಗಳನ್ನು ಅನುಸರಿಸಬೇಕು ಎಂದು ರಾಯಭಾರಿ ಹೇಳಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ