ಬೆಂಗಳೂರು: ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಮತ್ತು Omicron ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಒಮಿಕ್ರಾನ್ ಅತಿ ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ನಾಳೆ ಸಂಜೆ ತಜ್ಞರೊಂದಿಗೆ ನಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.
ಅಕ್ಕಪಕ್ಕ ರಾಜ್ಯಗಳಲ್ಲಿ ಹಾಗೂ ಕರ್ನಾಟಕಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್-19 ಹಾಗೂ ಓಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ತಜ್ಞರ ಜೊತೆ ಚರ್ಚೆಯ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವು ಕ್ರಮಗಳ ಅಗತ್ಯವನ್ನು ಮನಗಂಡು ತಜ್ಞರ ಜೊತೆ ಮಾತುಕತೆ, ಚರ್ಚೆ ನಡೆಸುತ್ತೇವೆ.ಅವರು ನೀಡಿದ ಸಲಹೆಗಳ ಆಧಾರದ ಮೇಲೆ ಗುರುವಾರ ಸಂಪುಟ ಸಹೋದ್ಯೋಗಿಗಳ ಜೊತೆ ಸಚಿವ ಸಂಪುಟ ನಡೆಸಿ ಚರ್ಚಿಸುತ್ತೇನೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಒಟ್ಟಾರೆ ಸ್ಥಿತಿಗತಿ, ತೆಗೆದುಕೊಳ್ಳಬೇಕಾದ ದೀರ್ಘಾವಧಿ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಈ ಹಿಂದೆ ಕೋವಿಡ್ ಮೊದಲ ಮತ್ತು ಎರಡನೇ ಅಲೆ ಬಂದು ಲಾಕ್ ಡೌನ್ ಮಾಡಿ ಆದ ಅನುಭವಗಳು, ಆರೋಗ್ಯ ವ್ಯವಸ್ಥೆ, ಕೋವಿಡ್ ಮುನ್ನೆಚ್ಚರಿಕೆ ಯಾವ ರೀತಿ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಮತ್ತು ಜನತೆಗೆ ಸಹ ಗೊತ್ತಾಗಿದೆ. ಈ ಸಂದರ್ಭದಲ್ಲಿ ಜನರು ಸ್ವ ನಿರ್ಬಂಧ ಹಾಕಿಕೊಳ್ಳಲೇಬೇಕು. ಸ್ವಯಂ ನಿಯಂತ್ರಣ ಮಾಡಿಕೊಂಡು ಆರೋಗ್ಯ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಕಷ್ಟವಾಗುತ್ತದೆ ಎಂದರು. ಮುಂದಿನ ದಿನಗಳಲ್ಲಿ ಓಮಿಕ್ರಾನ್ ಸೋಂಕಿನ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರುವ ಸುಳಿವನ್ನು ಸಿಎಂ ನೀಡಿದ್ದಾರೆ.
ಇಂದು ರಾಜ್ಯಾದ್ಯಂತ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತಿದ್ದೇನೆ. ಯುವಜನತೆಯನ್ನು ಕೊರೋನಾ ಸುರಕ್ಷಾ ಚಕ್ರದ ಒಳಗೆ ತರಬೇಕು ಎಂಬುದು ಸರ್ಕಾರದ ಆದ್ಯತೆಯಾಗಿದೆ. ಇದಕ್ಕೆ ಶಿಕ್ಷಕರು, ಪೋಷಕರು, ಮಕ್ಕಳು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ