ಚಿಕ್ಕಮಗಳೂರು:-ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕಫ್ರ್ಯೂವನ್ನು ಮುಂದುವರೆ ಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾತ್ರಿ ಕಫ್ರ್ಯೂವನ್ನು ಜಾರಿಗೊಳಿಸಲಾಗುತ್ತಿದೆ.
ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಮತ್ತಷ್ಟು ದಿನ ರಾತ್ರಿ ಕಫ್ರ್ಯೂ ಮುಂದುವರೆಯಲಿದೆ. ಸರ್ಕಾರದ ಜತೆ ಸಾರ್ವಜನಿಕರು ಕೈ ಜೋಡಿಸಿ, ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಇಲ್ಲದಿದ್ದರೆ ಲಾಕ್‍ಡೌನ್ ಅನಿವಾರ್ಯವಾಗಬಹುದು ಎಂದರು.
ಸದ್ಯಕ್ಕೆ ಲಾಕ್‍ಡೌನ್ ಮಾಡುವ ಉದ್ದೇಶ ಇಲ್ಲ. ಅನಿವಾರ್ಯವಾದರೆ ಮಾಡಬೇಕಾಗಬಹುದು. ಜನರ ಜೀವ ಉಳಿಸಲು ಆರ್ಥಿಕಾಭಿವೃದ್ಧಿ ಮತ್ತು ಶಾಲಾ -ಕಾಲೇಜು ಬಂದ್ ಮಾಡಬೇಕಾಗಬಹುದು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಕೋವಿಡ್ ನಿಯಮಗಳನ್ನು ಮುರಿಯದೆ ಸ್ವಯಂ ಅನುಸರಿಸಬೇಕು ಎಂದು ಹೇಳಿದರು.
ಸಾರ್ವಜನಿಕರ ಸಹಕಾರ ಸೂಕ್ತ ರೀತಿಯಲ್ಲಿ ದೊರೆಯದಿದ್ದರೆ ಲಾಕ್‍ಡೌನ್ ಅನಿವಾರ್ಯವಾಗಬಹುದು. ಈಗಾಗಲೇ ಮಾಸ್ಕ್ ಧರಿಸದೆ ಓಡಾಟ ಮಾಡುವುದು ಕಂಡು ಬರುತ್ತಿದೆ. ಮದುವೆ ಮೊದಲಾದ ಕಾರ್ಯಕ್ರಮಗಳಿಗೆ ಸಾವಿರಾರು ಜನ ಸೇರುತ್ತಿದ್ದಾರೆ. ಇದು ಸೋಂಕು ಹರಡಲು ಎಡೆಮಾಡಿಕೊಡಬಹುದು. ಈಗಾಗಲೇ ಕೋವಿಡ್ 2ನೇ ಅಲೆಯಲ್ಲಿ ಉಂಟಾದ ಸಾವು-ನೋವುಗಳು ನಮ್ಮ ನೆನಪಿನಲ್ಲಿವೆ. ಅದಕ್ಕೆ ಅವಕಾಶ ಕೊಡದಂತೆ ತಡೆಯುವ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)