janadhvani

Kannada Online News Paper

ಅಮಾಯಕ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ- ಆರೋಪಿಗಳ ವಿರುದ್ದ ಕೇಸು ದಾಖಲು

ಕೊಡಗು :- ಜಿಲ್ಲೆಯ ಕುಶಾಲನಗರದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಾದಿಕ್ ಎಂಬ ವಿದ್ಯಾರ್ಥಿಗೆ ಮುಸ್ಲಿಂ ಎಂಬ ಕಾರಣಕ್ಕೆ ABVP ಗೂಂಡಾಗಳು ಕೆಲವು ದಿನಗಳಿಂದ ಅವಾಚ್ಯ ಶಬ್ದಗಳಿಂದ ನಿಂದಿಸಿ (Ragging) ಮಾಡುತಿದ್ದು ಇದನ್ನು ಸಾದಿಕ್ ಕಾಲೇಜಿನ ಪ್ರಾಂಶುಪಾಲರ ಬಳಿ ಹೇಳಿದ ಎಂಬ ಕಾರಣವನ್ನು ಮುಂದಿಟ್ಟುಕೊಂಡು ನೆನ್ನೆ ದಿನ ಕಾಲೇಜಿನ ABVP ಗೂಂಡಾಗಳು ವಿದ್ಯಾರ್ಥಿಗೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು SDPI ನಿಯೋಗವು ಆಸ್ಪತ್ರೆಗೆ ದಾಖಲಿಸಿ ಆರೋಪಿಗಳ ವಿರುದ್ದ ಕೇಸು ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಪದೇ ಪದೇ ವಿದ್ಯಾರ್ಥಿಗಳ ಮೇಲೆ‌ ಹಲ್ಲೆ ಪ್ರಕರಣಗಳು ಮುಂದುವರೆಯುತ್ತಿದ್ದು, ಪೊಲೀಸ್ ಇಲಾಖೆಯ ಜಾಣ‌ ಮೌನವು ಇದಕ್ಕೆ ಪುಷ್ಟಿ ನೀಡುವಂತಿದೆ. ಕುಶಾಲನಗರ ಕಾಲೇಜಿನಲ್ಲಿ ನಡೆದಿರುವ ಘಟನೆಯ ಎಲ್ಲಾ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಎಸ್. ಡಿ.ಪಿ.ಐ. ಆಗ್ರಹಿಸುತ್ತಿದೆ.