ನವದೆಹಲಿ: ಹೊಸ ಕೋವಿಡ್-19 ನಿಯಮಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಜ.08 ರಂದು ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ.
ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ವರ್ಷ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು ಕೋವಿಡ್-19 ನಿಯಮಗಳ ಪಾಲನೆಯೊಂದಿಗೆ ಮತದಾನ ನಡೆಯಲಿದೆ.
ಕೋವಿಡ್-19 ಸುರಕ್ಷತಾ ಕ್ರಮಗಳ ಹಿನ್ನೆಲೆಯಲ್ಲಿ ಮತದಾನದ ಗಡುವನ್ನು 1 ಗಂಟೆ ಹೆಚ್ಚು ವಿಸ್ತರಿಸಲಾಗಿದೆ. ಹಾಗೂ ರಾಜಕೀಯ ಪಕ್ಷಗಳು ಹೆಚ್ಚು ವರ್ಚ್ಯುಯಲ್ ರ್ಯಾಲಿಗಳತ್ತ ಗಮನ ಹರಿಸಬೇಕೆಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಚುನಾವಣೆ ಎದುರಿಸಲಿರುವ 5 ರಾಜ್ಯಗಳಲ್ಲಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.
ಫೆ.10 ರಿಂದ ಮತದಾನ ಪ್ರಾರಂಭವಾಗಿ ಮಾ.7 ವರೆಗೆ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು ಮಾ.10 ಕ್ಕೆ ಫಲಿತಾಂಶ ಘೋಷಣೆಯಾಗಲಿದೆ. ಪಂಜಾಬ್, ಗೋವಾ, ಉತ್ತರಾಖಂಡ್ ಗಳಲ್ಲಿ ಫೆ.14 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದರೆ, ಮಣಿಪುರದಲ್ಲಿ ಫೆ.27 ರಂದು ಮೊದಲ ಹಂತ ಹಾಗೂ ಮಾ.03 ರಂದು 2 ನೇ ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ 7 ಹಂತದ ಚುನಾವಣೆ ನಡೆಯಲಿದೆ. ಫೆ.10 ರಂದು ಮೊದಲ ಹಂತದ ಮತದಾನ
ಫೆ.14- ದ್ವಿತೀಯ ಹಂತದ ಮತದಾನ
ಫೆ.20- ತೃತೀಯ ಹಂತ
ಫೆ.23-4 ನೇ ಹಂತ
ಫೆ.27-5 ನೇ ಹಂತ
ಮಾ.3 ರಂದು 6 ನೇ ಹಂತ
ಮಾ.07- 7 ನೇ ಹಂತ ಎಂದು ಆಯುಕ್ತರು ತಿಳಿಸಿದ್ದಾರೆ. ಮಾ.10 ರಂದು ಫಲಿತಾಂಶ ಹೊರಬೀಳಲಿದೆ.
















ಇನ್ನಷ್ಟು ಸುದ್ದಿಗಳು
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ