ಅಮೃತಸರ: ಇಟೆಲಿಯಿಂದ ಪಂಜಾಬಿನ ಅಮೃತಸರಕ್ಕೆ ಬಂದ ಪ್ರಯಾಣಿಕರ ಕೋವಿಡ್ ವರದಿಯಲ್ಲಿ ತಪ್ಪು ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ, ಖಾಸಗಿ ಲ್ಯಾಬೊರೇಟರಿ ವಿರುದ್ಧ ತನಿಖೆ ಕೈಗೊಳ್ಳಲಾಗಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಇಟೆಲಿಯಿಂದ ಆಗಮಿಸಿದ್ದ ಹಲವು ಪ್ರಯಾಣಿಕರು ತಮ್ಮ ಕೋವಿಡ್ ವರದಿ ತಪ್ಪಾಗಿ ಬಂದಿದೆ ಎಂದು ಆರೋಪಿಸಿದ್ದರು. ವಿಮಾನ ಹತ್ತುವ ಮೊದಲು ಪರೀಕ್ಷೆ ನಡೆಸಿದಾಗ ಕೋವಿಡ್ ನೆಗೆಟಿವ್ ಇತ್ತಾಗಿಯೂ, ವಿಮಾನದಿಂದ ಇಳಿಯುವ ಹೊತ್ತಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿರುವ ಕುರಿತು ಅನುಮಾನ ವ್ಯಕ್ತಪಡಿಸಿರುವ ಪ್ರಯಾಣಿಕರು, ತಮ್ಮ ವರದಿ ತಪ್ಪಾಗಿ ಬಂದಿದೆ ಎಂದು ದೂರಿದ್ದರು.
ಅದೂ ಅಲ್ಲದೆ, ಕೆಲವು ಪ್ರಯಾಣಿಕರನ್ನು ಮರು ಪರೀಕ್ಷೆಗೆ ಒಳಪಡಿಸಿದ್ದು, ಎರಡನೇ ಬಾರಿ ಕೋವಿಡ್ ನೆಗೆಟಿವ್ ವರದಿ ಬಂದಿತ್ತು. ಇದು ಪ್ರಯಾಣಿಕರ ಆರೋಪಕ್ಕೆ ಇನ್ನಷ್ಟು ಪುಷ್ಟಿ ನೀಡಿತ್ತು.
ಆರೋಪ ಕೇಳಿ ಬಂದ ಬೆನ್ನಲ್ಲೇ, ಅಮೃತಸರ ವಿಮಾನ ನಿಲ್ದಾಣ ಅಧಿಕಾರಿಗಳು ಸ್ಥಳೀಯ ಲ್ಯಾಬೊರೇಟರಿ ಒಂದರ ಸೇವೆಯನ್ನು ಪಡೆಯಲು ತೀರ್ಮಾನಿಸಿದ್ದು, ಈ ಮೊದಲು ಸೇವೆ ಸಲ್ಲಿಸುತ್ತಿದ್ದ ದಿಲ್ಲಿ ಮೂಲದ ಲ್ಯಾಬೊರೇಟರಿ ವಿರುದ್ಧ ತನಿಖೆ ಆರಂಭಿಸಿದ್ದಾರೆ.
ಸಹಾಯಕ ಸಿವಿಲ್ ಸರ್ಜನ್ ಡಾ. ಅಮರ್‌ಜಿತ್ ಸಿಂಗ್ ಈ ಕುರಿತು ಪ್ರತಿಕ್ರಿಯಿಸಿದ್ದು, “ಲ್ಯಾಬ್‌ನ ದೋಷಪೂರಿತ ಕೆಲಸಗಳ ವಿರುದ್ಧ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಿಂದ ತನಿಖೆಯನ್ನು ಪ್ರಾರಂಭಿಸಲಾಗಿದೆ. ಪ್ರಸ್ತುತ ದೆಹಲಿ ಮೂಲದ ಲ್ಯಾಬ್‌ನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಸ್ಥಳೀಯ ಲ್ಯಾಬ್ ಒಂದು ತನ್ನ ಕೆಲಸವನ್ನು ಪುನರಾರಂಭಿಸಿದೆ.” ಎಂದು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ