ನವದೆಹಲಿ|ದುಬೈ ವಿಮಾನ ನಿಲ್ದಾಣದಲ್ಲಿ ಭಾರೀ ಅಚಾತುರ್ಯವೊಂದು ಸಂಭವಿಸಿದ್ದು ಅಧಿಕಾರಿಗಳ ಸಮಯಪ್ರಜ್ಞೆಯಿಂದ ಬಲು ದೊಡ್ಡ ದುರಂತವು ತಪ್ಪಿದಂತಾಗಿದೆ. ಒಂದೇ ರನ್ ವೇಯಲ್ಲಿ ಎರಡು ವಿಮಾನಗಳು ಟೇಕಾಫ್ ಆಗಲು ಯತ್ನಿಸಿದಾಗ ಈ ಘಟನೆ ನಡೆದಿದೆ. ಕೊನೆಯ ಕ್ಷಣದಲ್ಲಿ ಏರ್ ಟ್ರಾಫಿಕ್ ಕಂಟ್ರೋಲ್ ಸಮಯೋಚಿತ ಮಧ್ಯಪ್ರವೇಶದ ನಂತರ ಒಂದು ವಿಮಾನವನ್ನು ಟ್ಯಾಕ್ಸಿ ಬೇಗೆ ತಿರುಗಿಸುವಲ್ಲಿ ಯಶಸ್ವಿಯಾದ್ದರಿಂದ ಭಾರೀ ಅಪಘಾತವೂಂದು ತಪ್ಪಿದೆ.
ಬೆಂಗಳೂರು ಮತ್ತು ಹೈದರಾಬಾದ್ಗೆ ತೆರಳುತ್ತಿದ್ದ ಎಮಿರೇಟ್ಸ್ನ ಎರಡು ವಿಮಾನಗಳು ಅಪಘಾತದಿಂದ ಪಾರಾಗಿವೆ. ಹೈದರಾಬಾದ್ಗೆ ತೆರಳುವ ಇಕೆ 524 ವಿಮಾನ ರಾತ್ರಿ 9.45ಕ್ಕೆ ಹೊರಡಬೇಕಿತ್ತು. ಫ್ಲೈಟ್ EK568 ಕೇವಲ ಐದು ನಿಮಿಷಗಳ ಅಂತರದಲ್ಲಿ ಟೇಕ್ ಆಫ್ ಮಾಡಲು ನಿರ್ಧರಿಸಲಾಗಿತ್ತು. ದುರದೃಷ್ಟವಶಾತ್ ಈ ಎರಡು ವಿಮಾನಗಳು ಒಂದೇ ಸಮಯದಲ್ಲಿ ರನ್ವೇ ಮೇಲೆ ಬಂದಿವೆ.
ಹೈದರಾಬಾದಿಗೆ ಹೊರಟಿದ್ದ ವಿಮಾನ ಟೇಕಾಫ್ಗಾಗಿ ವೇಗವಾಗಿ ಸಾಗುತ್ತಿದ್ದಾಗ ಅದೇ ದಿಕ್ಕಿನಲ್ಲಿ ಇನ್ನೊಂದು ವಿಮಾನ ಬರುತ್ತಿರುವುದನ್ನು ಸಿಬ್ಬಂದಿ ಗಮನಿಸಿದ್ದಾರೆ. ಟೇಕ್-ಆಫ್ ಅನ್ನು ತಕ್ಷಣವೇ ನಿಲ್ಲಿಸುವಂತೆ ಏರ್ ಟ್ರಾಫಿಕ್ ಕಂಟ್ರೋಲ್ ಗೆ ಸೂಚಿಸಲಾಗಿದೆ. ನಂತರ ವಿಮಾನವು ನಿಧಾನವಾಗಿ, ರನ್ವೇ ದಾಟಿ ಟ್ಯಾಕ್ಸಿ ಬೇಗೆ ಚಲಿಸಿತು. ಇದೇ ರನ್ ವೇಯಲ್ಲಿ ಬೆಂಗಳೂರಿಗೆ ತೆರಳುವ ವಿಮಾನವನ್ನು ಟೇಕ್ ಆಫ್ ಮಾಡಲಾಯಿತು. ಕೆಲವು ನಿಮಿಷಗಳ ನಂತರ ಹೈದರಾಬಾದ್ ವಿಮಾನ ಹೊರಟಿದೆ.
ಯುಎಇಯಲ್ಲಿನ ಎಎಐಎಸ್ ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುತ್ತಿದೆ. ಗಂಭೀರ ಭದ್ರತಾ ಲೋಪವನ್ನು ಎಮಿರೇಟ್ಸ್ ಖಚಿತಪಡಿಸಿದೆ ಎಂದು ANI ವರದಿ ಮಾಡಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್