ಮಂಗಳೂರು: ಕರ್ನಾಟಕ ವಿಧಾನಸಭೆಯ ವಿಪಕ್ಷ ಉಪನಾಯಕರಾಗಿ ಆಯ್ಕೆಯಾದ ಜನಪ್ರಿಯ ಶಾಸಕರಾದ ಸನ್ಮಾನ್ಯ ಯುಟಿ ಖಾದರ್ ಅವರನ್ನು ಮಾಜಿ ಮೇಯರ್ ಕೆ.ಅಶ್ರಫ್ ಅಭಿನಂದಿಸಿದ್ದಾರೆ.
ಕರ್ನಾಟಕ ರಾಜ್ಯ ದ ಮಾಜಿ ಸಚಿವರು, ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರು, ಕೆ.ಪೀ.ಸಿ.ಸಿ ಕಾರ್ಯದರ್ಶಿಯು ಆಗಿರುವ ಸನ್ಮಾನ್ಯ ಶ್ರೀ ಯು.ಟಿ. ಖಾದರ್ ರವರು ಪ್ರಸ್ತುತ ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಉಪನಾಯಕರಾಗಿ ಆಯ್ಕೆಯಾಗಿದ್ದು, ಅವರು ರಾಜ್ಯ ಕಾಂಗ್ರೆಸ್ ಪಕ್ಷದ ನಾಲ್ಕನೇ ಶ್ರೇಯಾಂಕದ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಭವಿಷ್ಯದಲ್ಲಿ ರಾಜ್ಯ ರಾಜಕೀಯದಲ್ಲಿ ಯು.ಟಿ.ಖಾದರ್ ರವರಿಂದ ಜನತೆಗೆ ಉತ್ತಮ ಆಡಳಿತವನ್ನು ನಿರೀಕ್ಷಿಸುವಂತಾಗಲಿ, ಅವರ ರಾಜಕೀಯ ಜೀವನಕ್ಕೆ ಶುಭವಾಗಲಿ ಎಂದು ಹಾರೈಸುತ್ತೇನೆ.
ಕೆ.ಅಶ್ರಫ್.
ಮಾಜಿ ಮೇಯರ್, ಮಂಗಳೂರು.







