ದಮ್ಮಾಮ್ (ಕೆ.ಎಸ್.ಎ): ಇಲ್ಲಿನ ಖಾಸಗಿ ಸಂಸ್ಥೆಯೊಂದರಲ್ಲಿ ಸುಪರ್ವೈಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ, ಬಿಹಾರದ ಶತ್ರುದಾನ್ ಎಂಬುವವರು ಸುಮಾರು ಒಂದೂವರೆ ವರ್ಷದ ಹಿಂದೆ ದಿಢೀರನೆ ಕಾಣಿಸಿಕೊಂಡ ರೋಗ ಉಲ್ಬಣಗೊಂಡು ಕಿಂಗ್ ಫಹದ್ ಆಸ್ಪತ್ರೆಯಲ್ಲಿ ಕೋಮಾವಸ್ಥೆಯಲ್ಲಿದ್ದರು.
ಇವರನ್ನು ಊರಿಗೆ ಕಳಿಸುವ ವಿಷಯವಾಗಿ ಅವರ ಸಹೋದರ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ನಾಯಕರನ್ನು ಸಂಪರ್ಕಿಸಿದ್ದು, ಕೆ.ಸಿ.ಎಫ್ ದಮ್ಮಾಮ್ ಝೋನ್ ಸಾಂತ್ವನ ವಿಂಗ್ ನಾಯಕರಾದ ಬಾಷಾ ಗಂಗಾವಳಿ, ಕೆಸಿಎಫ್ ಸೌದಿ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಿ.ಪಿ ಯೂಸುಫ್ ಸಖಾಫಿ ಬೈತಾರ್ ಹಾಗೂ ಕೆಸಿಎಫ್ ರಾಷ್ಟ್ರೀಯ ಸಮಿತಿ ಸಾಂತ್ವನ ವಿಂಗ್ ಅಧ್ಯಕ್ಷರಾದ ಮೊಹಮ್ಮದ್ ಮಲೆಬೆಟ್ಟು ಅವರ ನೇತೃತ್ವದಲ್ಲಿ ಸಂಘಟನೆಯ ಇತರ ಸ್ವಯಂಸೇವಕರೊಂದಿಗೆ ನಿಯಮಿತವಾಗಿ ರೋಗಿಯನ್ನು ಭೇಟಿ ಮಾಡಿ, ರೋಗಿಯನ್ನು ಊರಿಗೆ ಕಳಿಸಲು ಬೇಕಾದ ಮೂಲಭೂತ ಅಗತ್ಯಗಳನ್ನು ಪೂರೈಸಿಕೊಟ್ಟಿದ್ದಾರೆ.
ಇಂತಹಾ ಸ್ಥಿತಿಯಲ್ಲಿರುವ ರೋಗಿಯನ್ನು ಮರಳಿ ಸ್ವದೇಶಕ್ಕೆ ಕಳುಹಿಸುವುದು ಒಂದು ಸವಾಲಾಗಿತ್ತು. ಸೌದಿ ಕಾನೂನು ಹಾಗು ಆರೋಗ್ಯ ಇಲಾಖೆಯ ನಿರಂತರ ಸಂಪರ್ಕದಿಂದ ಜನವರಿ 26 ರಂದು ರೋಗಿಯನ್ನು ಊರಿಗೆ ಕಳಿಸುವಲ್ಲಿ ಯಶಸ್ವಿಯಾಯಿತು.
ಲಕ್ನೊ ವಿಮಾನ ನಿಲ್ದಾಣದಿಂದ ಆಂಬುಲನ್ಸ್ ಮುಖಾಂತರ ಬಿಹಾರ ತಲಪಿಸಲಾಯಿತು. ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಈ ಒಂದು ಉತ್ತಮ ಕಾರ್ಯಾಚರಣೆಯಲ್ಲಿ ಸಾಂತ್ವನ ವಿಭಾಗದೊಂದಿಗೆ ಬೆಂಗಾವಲಾಗಿ ನಿಂತ ದಮ್ಮಾಮ್ ಝೋನ್ ಕಾರ್ಯಕಾರಿ ಮತ್ತು ಕ್ಯಾಬಿನೆಟ್ ಸದಸ್ಯರಿಗೆ ಹಾಗು ಇನ್ನಿತರ ಸಂಘ ಸಂಸ್ಥೆ ನಾಯಕರಿಗೆ ಕೆ.ಸಿ.ಎಫ್ ದಮ್ಮಾಮ್ ಝೋನ್ ಸಾಂತ್ವನ ವಿಭಾಗವು ಅಭಿನಂದನೆಗಳನ್ನು ಸಲ್ಲಿಸಿದೆ.

















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ