janadhvani

Kannada Online News Paper

ಕೇಸರೀಗೆ ಸಡ್ಡು ಹೊಡೆದು, ಹಿಜಾಬ್‌ಗೆ ಬೆಂಬಲಿಸಿ ನೀಲಿ ಶಾಲು ಧರಿಸಿದ ವಿದ್ಯಾರ್ಥಿಗಳು

ನೀಲಿ ಶಾಲು ಧರಿಸಿದ ವಿದ್ಯಾರ್ಥಿಗಳು ‘ಒಂದೇ ಮಾತರಂ’, ‘ಭಾರತ್‌ ಮಾತಾ ಕೀ ಜೈ’, ‘ಜೈ ಭೀಮ್‌‌’, ‘ಜೈ ಅಂಬೇಡ್ಕರ್‌’ ಎಂಬ ಘೋಷಣೆ ಮೊಳಗಿಸಿದ್ದಾರೆ. ಇದು ಕೇಸರಿ ಪಾಲಯಕ್ಕೆ ತಲೆನೋವಾಗಿದೆ.

ಚಿಕ್ಕಮಗಳೂರು: ಮುಸ್ಲಿಂ ವಿದ್ಯಾರ್ಥಿನಿಯರು ಮೊದಲಿನಿಂದಲೂ ಧರಿಸಿ ಬರುತ್ತಿರುವ ಹಿಜಾಬ್‌ಗೆ ವಿರೋಧ ಮಾಡಬಾರದು ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ‘ನೀಲಿ ಶಾಲು’ ಧರಿಸಿ ಕಾಲೇಜಿಗೆ ಬಂದಿದ್ದಾರೆ. ‘ಜೈ ಭೀಮ್‌’, ‘ಜೈ ಅಂಬೇಡ್ಕರ್‌’ ಎಂದು ಕೂಗಿ ಹಿಜಾಬ್‌ಗೆ ಬೆಂಬಲ ಸೂಚಿಸಿರುವುದು ಹೊಸ ಸಂಚಲನ ಮೂಡಿಸಿದೆ.

ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನ ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಘೋಷಣೆ ಕೂಗಿದ್ದಾರೆ. ಹಿಜಾಬ್‌ ವಿರೋಧಿಸಿ ಕೇಸರಿ ಶಾಲು ಹಾಕಿಕೊಂಡು ಬರುತ್ತಿದ್ದ ಬೆಳವಣಿಗೆಯ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಹಿಜಾಬ್ ವಿರೋಧಿಸಿ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಕಾಲೇಜಿನಲ್ಲಿ ಹಿಜಾಬ್‌ಗೆ ಅವಕಾಶ ನೀಡಬಾರದು ಎಂದು ಕೆಲ ವಿದ್ಯಾರ್ಥಿಗಳು ಆಗ್ರಹಿಸಿದರು.

ಹಿಜಾಬ್ ನಮ್ಮ ಹಕ್ಕು ಎಂದು ತೆಗೆಯಲ್ಲ ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದರು. ಕಾಲೇಜಿನಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಇತ್ತು. ಐಡಿಎಸ್‌ಜಿ ಕಾಲೇಜಿನಲ್ಲಿನ ಹಲವು ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಹಿಜಾಬ್‌ಗೆ ಬೆಂಬಲ ವ್ಯಕ್ತಪಡಿಸಿದರು. ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ.

ಈ ನಡುವೆ ಕೇಸರಿ ಹಾಗೂ ನೀಲಿ ಶಾಲುಗಳ ನಡುವೆ ಧರಿಸಿದವರು ಮುಖಾಮುಖಿಯಾಗಿರುವ ವಿಡಿಯೊಗಳು ಹರಿದಾಡಿವೆ. ನೀಲಿ ಶಾಲು ಧರಿಸಿದ ವಿದ್ಯಾರ್ಥಿಗಳು ‘ಒಂದೇ ಮಾತರಂ’, ‘ಭಾರತ್‌ ಮಾತಾ ಕೀ ಜೈ’, ‘ಜೈ ಭೀಮ್‌‌’, ‘ಜೈ ಅಂಬೇಡ್ಕರ್‌’ ಎಂಬ ಘೋಷಣೆ ಮೊಳಗಿಸಿದ್ದಾರೆ. ಇದು ಕೇಸರಿ ಪಾಲಯಕ್ಕೆ ತಲೆನೋವಾಗಿದೆ.