ಚಿಕ್ಕಮಗಳೂರು: ಮುಸ್ಲಿಂ ವಿದ್ಯಾರ್ಥಿನಿಯರು ಮೊದಲಿನಿಂದಲೂ ಧರಿಸಿ ಬರುತ್ತಿರುವ ಹಿಜಾಬ್‌ಗೆ ವಿರೋಧ ಮಾಡಬಾರದು ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ‘ನೀಲಿ ಶಾಲು’ ಧರಿಸಿ ಕಾಲೇಜಿಗೆ ಬಂದಿದ್ದಾರೆ. ‘ಜೈ ಭೀಮ್’, ‘ಜೈ ಅಂಬೇಡ್ಕರ್’ ಎಂದು ಕೂಗಿ ಹಿಜಾಬ್‌ಗೆ ಬೆಂಬಲ ಸೂಚಿಸಿರುವುದು ಹೊಸ ಸಂಚಲನ ಮೂಡಿಸಿದೆ.
ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನ ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಘೋಷಣೆ ಕೂಗಿದ್ದಾರೆ. ಹಿಜಾಬ್ ವಿರೋಧಿಸಿ ಕೇಸರಿ ಶಾಲು ಹಾಕಿಕೊಂಡು ಬರುತ್ತಿದ್ದ ಬೆಳವಣಿಗೆಯ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಹಿಜಾಬ್ ವಿರೋಧಿಸಿ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಕಾಲೇಜಿನಲ್ಲಿ ಹಿಜಾಬ್‌ಗೆ ಅವಕಾಶ ನೀಡಬಾರದು ಎಂದು ಕೆಲ ವಿದ್ಯಾರ್ಥಿಗಳು ಆಗ್ರಹಿಸಿದರು.
ಹಿಜಾಬ್ ನಮ್ಮ ಹಕ್ಕು ಎಂದು ತೆಗೆಯಲ್ಲ ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದರು. ಕಾಲೇಜಿನಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಇತ್ತು. ಐಡಿಎಸ್‌ಜಿ ಕಾಲೇಜಿನಲ್ಲಿನ ಹಲವು ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಹಿಜಾಬ್‌ಗೆ ಬೆಂಬಲ ವ್ಯಕ್ತಪಡಿಸಿದರು. ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ.
ಈ ನಡುವೆ ಕೇಸರಿ ಹಾಗೂ ನೀಲಿ ಶಾಲುಗಳ ನಡುವೆ ಧರಿಸಿದವರು ಮುಖಾಮುಖಿಯಾಗಿರುವ ವಿಡಿಯೊಗಳು ಹರಿದಾಡಿವೆ. ನೀಲಿ ಶಾಲು ಧರಿಸಿದ ವಿದ್ಯಾರ್ಥಿಗಳು ‘ಒಂದೇ ಮಾತರಂ’, ‘ಭಾರತ್ ಮಾತಾ ಕೀ ಜೈ’, ‘ಜೈ ಭೀಮ್’, ‘ಜೈ ಅಂಬೇಡ್ಕರ್’ ಎಂಬ ಘೋಷಣೆ ಮೊಳಗಿಸಿದ್ದಾರೆ. ಇದು ಕೇಸರಿ ಪಾಲಯಕ್ಕೆ ತಲೆನೋವಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ