ಮಂಗಳೂರು: ಇಲ್ಲಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ಹೆಸರಿನಲ್ಲಿ ವೀಡಿಯೋ ಒಂದು ಸಾಮಾಜಿಕ ತಾಣದಲ್ಲಿ ವ್ಯಾಪಕ ಪ್ರಚಾರಗೊಂಡಿದ್ದು, ಇದು ಸುಳ್ಳು ಸುದ್ದಿ ಎಂದು ಮಂಗಳೂರಿನ ಪೋಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ. ವೀಡಿಯೋ
ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ನಡೆದಿದೆ ಎಂದು ಬಿಂಬಿಸಿ ಪ್ರಚಾರಗೊಂಡಿರುವ ವೀಡಿಯೋ, ಬೇರೆ ಯಾವುದೋ ಜಿಲ್ಲೆಯಲ್ಲಿ ಯಾವಾಗಲೋ ನಡೆದ ಘಟನೆಯಾಗಿದ್ದು, ಮಂಗಳೂರಿನ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿ ನ್ಯಾಯಾಲಯದ ಆದೇಶದಂತೆ ಶಾಂತಿಯುತ ತರಗತಿ ನಡೆಸಲು ಎಲ್ಲರೂ ಸಹಕರಿಸಿದ್ದಾರೆ ಎಂದು ಕಮಿಷನರ್ ಹೇಳಿದರು.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಿಜಾಬ್ ಧರಿಸಿ ಶಿಕ್ಷಣ ಪಡೆಯುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಗಳ ಶಿಕ್ಷಣವನ್ನು ಮೊಟಕುಗೊಳಿಸಲೆಂದು ಕೆಲವು ವಿದ್ಯಾರ್ಥಿಗಳು ಕೇಸರೀ ಶಾಲನ್ನು ಧರಿಸಿ ವಿವಾದವೆಬ್ಬಿಸಿರುವ ಹಿನ್ನೆಲೆಯಲ್ಲಿ, ಹಿಜಾಬ್ ಎಂಬ ಮುಸ್ಲಿಂ ಯುವತಿಯರ ಧಾರ್ಮಿಕ ಹಕ್ಕಿನ ಸಂರಕ್ಷಣೆಗಾಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅದರ ವಿಚಾರಣೆಯು ಹೈಕೋರ್ಟ್ ನಲ್ಲಿ ನಡೆಯುತ್ತಿದ್ದು, ಇಂದು ವಿಚಾರಣೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನಾಳೆಗೆ ಮುಂದೂಡಿದೆ. ಅಂತಿಮ ತೀರ್ಪು ಬರುವ ತನಕ ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ಶಾಂತಿಯುತವಾಗಿ ತರಗತಿ ನಡೆಯುತ್ತಿರುವ ಕೆಲವು ಶಾಲಾ-ಕಾಲೇಜುಗಳನ್ನು ಬೆನ್ನೆತ್ತಿ ಕೆಲವು ಕೋಮು ವಿಷ ಬೀಜವನ್ನು ಬಿತ್ತುವ ಟಿವಿ ಮಾಧ್ಯಮಗಳು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಲು ನೋಡುತ್ತಿದೆ. ಇದನ್ನು ಗಮನಿಸಿದ ಹೈಕೋರ್ಟ್, ರಾಜ್ಯದಲ್ಲಿ ಶಾಂತಿಯನ್ನು ಕಾಪಾಡಲು, ಜವಾಬ್ದಾರಿಯುತ ನಾಗರಿಕರಂತೆ ವರ್ತಿಸಬೇಕು ಎಂದು ಮಾಧ್ಯಮದವರಿಗೆ ಸಲಹೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ