ಬೆಂಗಳೂರು: ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ಕುರಿತು ಸೋಮವಾರ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ನ ತ್ರಿಸದಸ್ಯ ವಿಸ್ತ್ರತ ಪೀಠ ವಿಚಾರಣೆಯನ್ನು ಮಂಗಳವಾರ ಮಧಾಹ್ನ 2.30 ಕ್ಕೆ ಮುಂದೂಡಿದೆ. ಮುಖ್ಯ ನ್ಯಾ.ರಿತುರಾಜ್ ಅವಸ್ಥಿ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾ.ಜೈಬುನ್ನಿಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಇಂದು ಫೆ 14 ಮಧ್ಯಾಹ್ನ 2.30ಕ್ಕೆ ಆರಂಭಿಸಿ ಸುದೀರ್ಘ ವಾದವನ್ನು ಆಲಿಸಿತು.
ಆರ್ಟಿಕಲ್ 25 ಪ್ರಕಾರ ಶಿರವಸ್ತ್ರ ಧರಿಸುವುದು ತಪ್ಪಲ್ಲ ಎಂದು ಅರ್ಜಿದಾರ ವಿದ್ಯಾರ್ಥಿನಿಯರ ಪರ ವಕೀಲ ದೇವದತ್ ಕಾಮತ್ ವಾದ ಮಂಡಿಸಿದರು. ಹಲವು ವಿಚಾರಗಳನ್ನು ಉಲ್ಲೇಖಿಸಿ ವಿಧ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಜವಾಬ್ದಾರಿಯುತವಾಗಿರಬೇಕು: ಮಾಧ್ಯಮಗಳಿಗೆ ಸಲಹೆ ನೀಡಿದ ಕೋರ್ಟ್
ನಾವು ಮಾಧ್ಯಮಗಳಿಗೆ ವಿನಂತಿಯನ್ನು ಮಾಡುತ್ತೇವೆ. ನಾವು ಹೆಚ್ಚು ಜವಾಬ್ದಾರಿಯುತವಾಗಿರಬೇಕು. ನೀವು ನಾಲ್ಕನೆಯ ಸ್ತಂಭ. ರಾಜ್ಯದಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ತರಲು ಪ್ರಯತ್ನ ಮಾಡೋಣ. ನಾವೆಲ್ಲರೂ ಜವಾಬ್ದಾರಿಯುತ ನಾಗರಿಕರಂತೆ ವರ್ತಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಆರ್ಟಿಕಲ್ 25 ನಲ್ಲೇನಿದೆ?
25 ನೇ ವಿಧಿಯು ಆತ್ಮಸಾಕ್ಷಿಯ ಸ್ವಾತಂತ್ರ್ಯ, ಎಲ್ಲಾ ನಾಗರಿಕರಿಗೆ ಧರ್ಮವನ್ನು ಪ್ರತಿಪಾದಿಸುವ, ಅಭ್ಯಾಸ ಮಾಡುವ ಮತ್ತು ಪ್ರಚಾರ ಮಾಡುವ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ. ಪ್ರತಿ ಧಾರ್ಮಿಕ ಪಂಗಡವು ನೈತಿಕತೆ, ಆರೋಗ್ಯ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಒಳಪಟ್ಟು ಹಕ್ಕುಗಳನ್ನು ಹೊಂದಿರುವ ಬಗೆಗಾಗಿದೆ. ಮಾತ್ರವಲ್ಲದೆ ಇಸ್ಲಾಂ ಶರಿಯಾ ಕಾನೂನುಗಳ ಡ್ರೆಸ್ ಕೋಡ್ ಕುರಿತು ಉಲ್ಲೇಖ ಮಾಡಲಾಗಿದೆ.ಈ ಹಿಂದೆ ವಿಚಾರಣೆಗೊಳಗಾದ ಹಲವು ಪ್ರಕರಣಗಳ ತೀರ್ಪಿನ ಬಗ್ಗೆ ಪ್ರಸ್ತಾವಿಸಲಾಗಿದೆ. ಕೇಂದ್ರೀಯ ವಿದ್ಯಾಲಯದಲ್ಲಿ ಹೆಡ್ ಸ್ಕಾರ್ಫ್ ಗಳನ್ನು ಧರಿಸಲು ಅನುಮತಿ ನೀಡಲಾಗಿದೆ. ಕಳೆದ 2 ವರ್ಷಗಳಿಂದ ವಿದ್ಯಾರ್ಥಿನಿಯರು ಉಡುಪಿಯ ಕಾಲೇಜಿಗೆ ಹೋಗುತ್ತಿದ್ದು, ಯೂನಿಫಾರ್ಮ್ ಹಾಕುತ್ತಿದ್ದು, ಯೂನಿಫಾರ್ಮ್ ನ ಬಣ್ಣದ ಹಿಜಾಬನ್ನೇ ಪ್ರವೇಶಾತಿ ಪಡೆದಾಗಿನಿಂದ ಧರಿಸುತ್ತಿದ್ದಾರೆ ಎಂದು ವಕೀಲ ಕಾಮತ್ ಹೇಳಿದರು.
ಫೆ. 10 ಗುರುವಾರ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಶಿಕ್ಷಣ ಸಂಸ್ಥೆಗಳು ತಕ್ಷಣ ಕಾರ್ಯಾರಂಭ ಮಾಡಬೇಕು, ಅರ್ಜಿಗಳ ವಿಚಾರಣೆ ಮುಗಿಯುವವರೆಗೆ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಗುರುತುಗಳನ್ನು (ಹಿಜಾಬ್ ಮತ್ತು ಕೇಸರಿ ಶಾಲು) ಬಳಸುವಂತಿಲ್ಲ ಎಂದು ಸೂಚಿಸಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತ್ತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ