ಚಾಮರಾಜನಗರ: ಸಮವಸ್ತ್ರ ಸಂಬಂಧಿತ ವಿವಾದ ಉದ್ಭವಿಸಿದ್ದು ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ, ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಲ್ಲ ಅವರಿಗೆ ಯಾವುದೇ ರೀತಿಯ ವಸ್ತ್ರ ಧರಿಸಿ ಕಾಲೇಜಿಗೆ ಬರಲು ಅವಕಾಶವಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ಕೆಲವೊಂದು ಕಾಲೇಜಿನಲ್ಲಿ ಹೈಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥೈಸಿಕೊಂಡು, ಶಿರವಸ್ತ್ರ ಧರಿಸಿದ ಪದವಿ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಿ, ಪಾಠ, ಪರೀಕ್ಷೆ ನಡೆಸಿದಂತಹಾ ಪ್ರಕರಣಗಳು ಬೆಳಕಿಗೆ ಬಂದಿದ್ದವು, ಇದೀಗ ಸಚಿವರ ಸ್ಪಷ್ಟೀಕರಣದಿಂದಾಗಿ ಗೊಂದಲ ನಿವಾರಣೆಯಾಗಿದೆ.
ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಾಗಿ, ನಿಯಮಕ್ಕೆ ಅನುಸಾರವಾಗಿಯೇ ಬರಬೇಕು. ಹಿಜಾಬ್ ಧರಿಸುವುದಕ್ಕೆ ಅವಕಾಶ ಇಲ್ಲ. ಹಿಜಾಬ್ ಕೇಸರಿ ಶಾಲು ವಿಚಾರದಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಅದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು’ ಎಂದರು.
ನಾಳೆಯಿಂದ ಕಾಲೇಜುಗಳು ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಅವರು ಈಗಾಗಲೇ ಸಷ್ಟಪಡಿಸಿದ್ದಾರೆ.ವಿದ್ಯಾರ್ಥಿಗಳು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕೊಡದೆ, ಸೌಹಾರ್ದತೆಯಿಂದ ಕಾಲೇಜುಗಳಿಗೆ ಹಾಜರಾಗಬೇಕು ಎಂದು ಮನವಿ ಮಾಡಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ