ಉಡುಪಿ: ಕೆಲವು ಶಾಲಾ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಉಡಪಿಯಲ್ಲಿ ಇನ್ನೂ ಮುಂದುವರಿದಿದ್ದು, ಇಲ್ಲಿನ ಕಾಲೇಜೊಂದರಲ್ಲಿ ಕೋರ್ಟ್ ಮಧ್ಯಂತರ ಆದೇಶದ ಹೊರತಾಗಿಯೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.
‘ಕೋರ್ಟ್ ಆದೇಶದ ಪ್ರಕಾರ ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ಇರಲಿಲ್ಲ. ಇದನ್ನು ವಿದ್ಯಾರ್ಥಿನಿಗಳಿಗೆ ಮನವರಿಕೆ ಮಾಡಿದ್ದೇವೆ. ಕೋರ್ಟ್ ತೀರ್ಪು ಬರುವವರೆಗೆ ಕಾಯುತ್ತೇವೆಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ. ಒಟ್ಟು 2326 ವಿದ್ಯಾರ್ಥಿನಿಯರಿದ್ದು 196 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿದ್ದಾರೆ. ಸದ್ಯ 40 ಮಂದಿ ಮಾತ್ರ ಹಿಜಾಬ್ ತೆಗೆಯಲು ಒಪ್ಪಿಲ್ಲ’ ಎಂದು ಪ್ರಾಂಶುಪಾಲ ಭಾಸ್ಕರ ಶೆಟ್ಟಿ ಹೇಳಿದರು.
‘ಕಾಲೇಜು ಕ್ಯಾಂಪಸ್ ನಲ್ಲಿ ಹಿಜಾಬ್ ಹಾಕಿಕೊಂಡು ತಿರುಗಾಡಲು ಅವಕಾಶ ಕೊಟ್ಟಿದ್ದೇವೆ. ತರಗತಿಗೆ ಬಾರದ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡುವ ತೀರ್ಮಾನ ತೆಗೆದುಕೊಳ್ಳುತ್ತೇವೆ. ಹೈಕೋರ್ಟ್ ಆದೇಶ ಬಂದ ಮೇಲೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅಲ್ಲಿಯವರೆಗೆ ಯಥಾಸ್ಥಿತಿ ಕಾಪಾಡುತ್ತೇವೆ’ ಎಂದರು.
‘ಹಿಜಾಬ್ ನಮ್ಮ ಹೆಮ್ಮೆ. ನಾವು ಮೊದಲಿನಿಂದಲೂ ಹಿಜಾಬ್ ಹಾಕುತ್ತಿದ್ದೇವೆ. ಕೋರ್ಟ್ ಆದೇಶ ಬರುವವರೆಗೂ ಕಾಯುತ್ತೇವೆ’ ಎಂದು ವಿದ್ಯಾರ್ಥಿನಿಯೊಬ್ಬರು ಹೇಳಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ