ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ವಿರುದ್ಧ ದೇಶದ್ರೋಹ ಮೊಕದ್ದಮೆ ದಾಖಲಿಸಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅಲ್ಲದೆ ಹಲವು ಸಂಘಪರಿವಾರದ ನಾಯಕರು ರಾಷ್ಟ್ರ ಧ್ವಜಕ್ಕೆ ಅಪಮಾನದ ಹೇಳಿಕೆ ನೀಡುತ್ತಿದ್ದಾರೆ. ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಅವರ ಹಿಡನ್ ಅಜೆಂಡಾ ಇದೇ ಆಗಿರುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಶ್ವರಪ್ಪ ರಾಷ್ಟ್ರ ವಿರೋಧಿ ಹೇಳಿಕೆ ನೀಡಿದ್ದಾರೆ. ಇವರ ವಿರುದ್ಧ ದೇಶದ್ರೋಹ ಮೊಕದ್ದಮೆ ದಾಖಲಿಸಬೇಕು. ಸದನದಲ್ಲಿ ನಿಲುವಳಿ ಸೂಚನೆ ಅಡಿಯಲ್ಲಿ ಚರ್ಚೆಗೆ ಅವಕಾಶ ಕೇಳುತ್ತೇವೆ. ಈ ಬಗ್ಗೆ ಈಗಾಗಲೇ ಸಭಾಪತಿಗಳನ್ನ ಕೇಳಿಕೊಂಡಿದ್ದೇವೆ ಎಂದರು.
ಕಾಲೇಜ್ ಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಸಂಬಂಧ ಗೊಂದಲ ವಿಚಾರವಾಗಿ ಪ್ರತಿಕ್ರಯಿಸಿದ ಅವರು, ಇದೊಂದು ಷಡ್ಯಂತ್ರ. ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿ ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ ಎಂದು ಕಿಡಿಕಾರಿದರು. ಸಂಘ ಪರಿವಾರದವರ ಮಾತನ್ನು ಕೇಳಿಕೊಂಡು ಮಕ್ಕಳ ಪ್ರವೇಶ ತಡೆಯಬಾರದೆಂಬುದು ನಮ್ಮ ಆಗ್ರಹ. ವಿದ್ಯಾರ್ಥಿಗಳ ಪ್ರವೇಶಕ್ಕೆ ಅಡ್ಡಿಪಡಿಸಬಾರದೆಂದು ನಮ್ಮ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತರನ್ನೂ ಬಂಧಿಸಲಾಗುತ್ತಿದೆ ಎಂದು ಆರೋಪಿಸಿದರು.
ಈಶ್ವರಪ್ಪ ಹೇಳಿದ್ದೇನು?
ಲೋಡ್ಗಟ್ಟಲೆ ಕೇಸರಿ ಶಾಲನ್ನು ಬಿಜೆಪಿಯವರು ಕಳಿಸಿದ್ದಾರೆ ಅನ್ನೋ ಡಿ.ಕೆ ಶಿವಕುಮಾರ್ ಆರೋಪ ವಿಚಾರವಾಗಿ ಮಾತನಾಡಿ,
ಕೇಸರಿ ಶಾಲು ಕೊಟ್ಟರೆ ಏನು ತಪ್ಪು.? ಎಂದು ಪ್ರಶ್ನಿಸಿದರು. ಕೇಸರಿ ಶಾಲು ಹಂಚಿರುವುದರಲ್ಲಿ ತಪ್ಪೇನಿಲ್ಲ.
ಭವಿಷ್ಯದಲ್ಲಿ ಭಗವದ್ಗಜವೇ ರಾಷ್ಟ್ರ ಧ್ವಜವಾಗಬಹುದು ಎಂದು ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಕೇಸರಿ ಶಾಲನ್ನು ಜಗತ್ತಿನಲ್ಲಿ ಎಲ್ಲಿ ಬೇಕಾದ್ರೂ ಹಾರಿಸ್ತೇವೆ. ಮುಂದೆ ಕೆಂಪು ಕೋಟೆ ಮೇಲೆ ಕೇಸರಿ ಧ್ವಜಹಾರಿಸುವುದಾಗಿ ಹೇಳಿಕೆ ನೀಡಿದ್ದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ