ಮಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಕೆಲವು ಪತ್ರಕರ್ತರ ವರ್ತನೆಯು ಆಕ್ಷೇಪಾರ್ಹವಾಗಿದ್ದು ಶಾಲಾ ಕಾಲೇಜುಗಳ ಆವರಣದಲ್ಲೇ ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕೆಂದು ಎಸ್ವೈಎಸ್ ರಾಜ್ಯಾಧ್ಯಕ್ಷ ಡಾ| ಎಂ.ಎಸ್.ಎಂ ಅಬ್ದುರ್ರಶೀದ್ ಝೈನಿ ಆಗ್ರಹಿಸಿದ್ದಾರೆ.
ಪತ್ರಕರ್ತನೋರ್ವ ಭಯಭೀತಳಾದ ವಿದ್ಯಾರ್ಥಿನಿಯೋರ್ವಳನ್ನು ಬೆನ್ನಟ್ಟಿ ವಿಡಿಯೋ ಮಾಡುತ್ತಿರುವ ಕರುಣಾಜನಕ ದೃಶ್ಯವೊಂದು ವೈರಲಾಗುತ್ತಿದೆ. ಇದು ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಅಲ್ಲದೆ, ಮಾಧ್ಯಮಗಳು ತಲುಪಿರುವ ನೈತಿಕ ಅಧಃಪತನಕ್ಕೆ ಸಾಕ್ಷಿಯೂ ಆಗಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ಬಗ್ಗೆ ಸ್ವಯಂಪ್ರೇರಿತರಾಗಿ ಕೇಸು ದಾಖಲಿಸಬೇಕು.ಇಂತಹ ಸಂದರ್ಭದಲ್ಲಿ ಮಕ್ಕಳ ನೆರವಿಗೆ ಬಾರದ ಶಿಕ್ಷಕ ಶಿಕ್ಷಕಿಯರ ವಿರುದ್ಧವೂ ಕ್ರಮಕೈಗೊಳ್ಳಬೇಕು. ಸಂತ್ರಸ್ತ ವಿದ್ಯಾರ್ಥಿನಿಯರಿಗೆ ನ್ಯಾಯವನ್ನು ಖಾತರಿಪಡಿಸಬೇಕು.
ಶಾಲಾ ಕಾಲೇಜು ಆವರಣದಲ್ಲಿ ಭಯಾನಕ ವಾತಾವರಣ ಸೃಷ್ಟಿಸುವ ಪತ್ರಕರ್ತರ ವಿರುದ್ಧ ಆಯೋಗವು ಕ್ರಮ ಕೈಗೊಳ್ಳಬೇಕಾಗಿರುವುದು ತುರ್ತು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಎಸ್ವೈಎಸ್,
ಪತ್ರಕರ್ತರು ಶಾಲಾ-ಕಾಲೇಜು ಆವರಣ ಪ್ರವೇಶಿಸಿ ವಿದ್ಯಾರ್ಥಿಗಳಿಂದ ಬಲವಂತದ ಹೇಳಿಕೆ ಪಡೆಯದಂತೆ ಆಯೋಗವು ಆದೇಶಿಸಬೇಕು ಎಂದು ಪ್ರಕಟನೆಯಲ್ಲಿ ಆಗ್ರಹಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ