ಬೆಂಗಳೂರು,ಫೆ.17: ಹಿಜಾಬ್ಗೆ ಸಂಬಂಧಿಸಿದಂತೆ ರಾಜ್ಯ ವಕ್ಫ್ ಮಂಡಳಿಯು ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಎನ್ ಕೆ ಎಂ ಶಾಫಿ ಸಅದಿ ಹೇಳಿದ್ದಾರೆ. ವೀಡಿಯೋ
ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಬೆನ್ನಲ್ಲೇ ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ಹೊರಡಿಸಿದ್ದ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಹಜ್, ವಕ್ಫ್ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ.
ಅಲ್ಪಸಂಖ್ಯಾತ ಇಲಾಖೆ ಅಡಿ ಬರುವ ಯಾವುದೇ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆ ಸೇರಿದಂತೆ ಯಾವುದೇ ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು, ಸ್ಕಾರ್ಪ್ ಗಳನ್ನು ಧರಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ಶಾಲೆ ಹಾಗೂ ತರಗತಿಗಳಲ್ಲಿ ಯಾವುದೇ ಧಾರ್ಮಿಕ ಬಾವುಟಗಳನ್ನು ಬಳಕೆ ಮಾಡುವಂತಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಎನ್ ಕೆ ಎಂ ಶಾಫಿ ಸಅದಿಯವರು, ರಾಜ್ಯ ಅಲ್ಪಸಂಖ್ಯಾತ ಹಜ್, ವಕ್ಫ್ ಇಲಾಖೆ ಹೊರಡಿಸಿದ ಸುತ್ತೋಲೆಯೊಂದು ಸಾಮಾಜಿಕ ತಾಣದಲ್ಲಿ ವೈರಲ್ ಆಗುತ್ತಿರುವುದು ಗಮನಕ್ಕೆ ಬಂದಿದೆ, ಈ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ, ಸದ್ಯ ಮಂಗಳೂರು ಪ್ರವಾಸದಲ್ಲಿದ್ದು, ನಮ್ಮ ಅಧಿಕಾರಿಗಳೊಂದಿಗೆ ಸಮಾಲೋಚಿಸಲಿದ್ದೇನೆ, ವಖ್ಫ್ ಮಂಡಳಿಯು ಹಿಜಾಬ್ಗೆ ಸಂಬಂಧಿಸಿದಂತೆ ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ