ವಿಜಯಪುರ: ಹಿಜಾಬ್ – ಕೇಸರಿ ಶಾಲು ವಿವಾದ ಜೀವಂತವಾಗಿರುವ ಮಧ್ಯೆಯೇ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಈಗ ಸಿಂಧೂರ ವಿವಾದ ತಲೆ ಎತ್ತಿದೆ. ಇಂಡಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ಓರ್ವ ವಿದ್ಯಾರ್ಥಿಗೆ ಕುಂಕುಮ ಅಳಿಸಿ ಕಾಲೇಜು ಪ್ರವೇಶಿಸುವಂತೆ ಉಪನ್ಯಾಸಕರು ತಾಕೀತು ಮಾಡಿದ್ದಾರೆ. ಇದಕ್ಕೆ ವಿದ್ಯಾರ್ಥಿ ಒಪ್ಪದಿದ್ದಾಗ ಕಾಲೇಜು ಪ್ರವೇಶ ನಿರಾಕರಿಸಲಾಗಿದೆ.
ಎಂದಿನಂತೆ ಕಾಲೇಜಿಗೆ ಬಂದ ವಿದ್ಯಾರ್ಥಿ ಗಂಗಾಧರ ಬಡಿಗೇರ್ ಹಣೆಗೆ ಸಿಂಧೂರ ಧರಿಸಿದ್ದ ಇದನ್ನು ಗಮನಿಸಿದ ಕಾಲೇಜಿನ ದೈಹಿಕ ಉಪನ್ಯಾಸಕ ಸಂಗಮೇಶ ಗೌಡ ತರಗತಿ ಪ್ರವೇಶಕ್ಕೆ ಅವಕಾಶ ಕೊಟ್ಟಿಲ್ಲ. ಈ ವೇಳೆ ಇವರಿಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಹಣೆಗೆ ಕುಂಕುಮ ಹಚ್ಚಿಕೊಂಡು ಬರುವುದು ಕೂಡ ಮತ್ತಷ್ಟು ಸಮಸ್ಯೆಗೆ ಕಾರಣ ಎಂದು ಸಿಂಧೂರ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಕಾಲೇಜಿನ ದೈಹಿಕ ನಿರ್ದೇಶಕರು ಸಲಹೆ ನೀಡಿದಾಗ ವಿದ್ಯಾರ್ಥಿ ಹಾಗೂ ಉಪನ್ಯಾಸಕರ ಮಧ್ಯೆ ವಾಗ್ವಾದವಾಗಿದೆ.
ಈ ವೇಳೆ ಕಾಲೇಜಿನ ದೈಹಿಕ ಉಪನ್ಯಾಸಕ ಸಂಗಮೇಶಗೌಡ ಹಾಗೂ ಪದವಿ ವಿದ್ಯಾರ್ಥಿ ಗಂಗಾಧರ ಬಡಿಗೇರ ನಡುವೆ ಮಾತಿನ ಚಕಮಕಿ ನಡೆದಿದ್ದು, ಹಿಜಾಬ್ ಹಾಗೂ ಕೇಸರಿ ಶಾಲು ಹೊರತು ಪಡಿಸಿ ಹಣೆಗೆ ಕುಂಕುಮ, ನಾಮ ಹಾಕಿ ಬರಬೇಡಿ ಎಂದರೆ ಹೇಗೆ. ನಮ್ಮ ಪಾರಂಪರಿಕ ಸಾಂಸ್ಕೃತಿಕ ಸಂಕೇತವಾಗಿರುವ ಸಿಂಧೂರ ತಿಲಕಕ್ಕೆ ಯಾಕೆ ಅನುಮತಿ ಇಲ್ಲ ಎಂದು ವಿದ್ಯಾರ್ಥಿ ಪಟ್ಟು ಹಿಡಿದಿದ್ದಾನೆ. ವಿಷಯ ತಿಳಿದ ಇತರೆ ಉಪನ್ಯಾಸಕರು, ಪೊಲೀಸರು ಸ್ಥಳಕ್ಕೆ ತೆರಳಿ ವಿದ್ಯಾರ್ಥಿಯ ಮನವೊಲಿಸಲು ಪ್ರಯತ್ನ ಪಟ್ಟಿದ್ದಾರೆ. ಆದರೆ ಉಪನ್ಯಾಸಕರ ವಾದಕ್ಕೆ ಒಪ್ಪದ ಗಂಗಾಧರ ಬಡಿಗೇರ್ನನ್ನು ಮನೆಗೆ ಕಳುಹಿಸಿದ್ದಾರೆ.
ಬಳಿಕ ಗಂಗಾಧರ ಬಡಿಗೇರ್ ಅಡ್ಡವಾಗಿ ಕುಂಕುಮ ಹಚ್ಚಿಕೊಂಡು ಬಂದಿದ್ದಾನೆ ಇದಕ್ಕೆ ಯಾಕೆ ಅವಕಾಶ ಕೊಟ್ಟಿಲ್ಲ ಎಂದು ಇತರ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಗೊಂದಲದ ವಾತಾವರಣವನ್ನು ತಿಳಿಗೊಳಿಸಿದರು
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ