janadhvani

Kannada Online News Paper

ಶಿವಮೊಗ್ಗ ಹತ್ಯೆ: ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ- ಎಸ್ಸೆಸ್ಸೆಫ್

ಶಾಂತಿ ಕಾಪಾಡಲು ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು

ಶಿವಮೊಗ್ಗ : ನಿನ್ನೆ ರಾತ್ರಿ ಹಿಂದೂ ಸಂಘಟನೆಯೊಂದರ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ದುಷ್ಕರ್ಮಿಗಳು ಕೊಂದು ಹಾಕಿದ್ದು ಅಕ್ಷಮ್ಯ ಅಪರಾಧ.

ಈ ಪ್ರಯುಕ್ತ ನಗರದಾದ್ಯಂತ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ತಕ್ಕ ಶಿಕ್ಷೆ ನೀಡಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಹೇಳಿದ್ದಾರೆ.

ಹತ್ಯೆಯ ಬಳಿಕ ನಗರದ ವಾತಾವರಣ ಪ್ರಕ್ಷುಬ್ಧಗೊಂಡಿದ್ದು ಹಲವರಿಗೆ ಗಾಯಗಳಾಗಿವೆ. ಸ್ಥಳದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಸ್ಸೆಸ್ಸೆಫ್ ಆಗ್ರಹಿಸಿದೆ.