ಮಂಗಳೂರು,ಫೆ.21: ಅನಿವಾಸಿ ಕನ್ನಡಿಗರ ಬಹು ನಿರೀಕ್ಷಿತ ಬೇಡಿಕೆಯೊಂದು ಈಡೇರುತ್ತಿದೆ. ಮಂಗಳೂರು ಮತ್ತು ಸೌದಿ ಅರೇಬಿಯಾದ ಜಿದ್ದಾ ನಡುವೆ ನೇರ ವಿಮಾನಯಾನವು ಆರಂಭಗೊಳ್ಳಲಿದೆ.
ಮುಂದಿನ ಮಾರ್ಚ್ ತಿಂಗಳ 2 ರಿಂದ ವಿಮಾನ ಸೇವೆ ಆರಂಭಗೊಳ್ಳುವುದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಪ್ರಕಟಿಸಿದ್ದಾಗಿ ಟ್ರಾವೆಲ್ ಏಜೆನ್ಸಿಗಳು ಮಾಹಿತಿ ನೀಡಿದ್ದಾರೆ. ಏರ್ ಇಂಡಿಯಾ ಎಕ್ಸ್ಪ್ರೆಸ್ನ ವೆಬ್ಸೈಟ್ನಲ್ಲಿ ಜಿದ್ದಾ ಮತ್ತು ಮಂಗಳೂರು ನಡುವಿನ ಬುಕಿಂಗ್ ಆರಂಭಗೊಂಡಿದೆ. ಮಾರ್ಚ್ ತಿಂಗಳ 2, 9, 16 ಮತ್ತು 23 ದಿನಾಂಕಗಳಲ್ಲಿ ಜಿದ್ದಾದಿಂದಲೂ, ಅದೇ ದಿನ ಮಂಗಳೂರಿನಿಂದಲೂ ವಿಮಾನ ಲಭ್ಯವಿದೆ.
ಮಂಗಳೂರಿನಿಂದ ಬೆಳಿಗ್ಗೆ 08-55 ಕ್ಕೆ ಹೊರಟು ಸೌದಿ ಸಮಯ ಮಧ್ಯಾಹ್ನ 12-45 ಕ್ಕೆ ಜಿದ್ದಾ ತಲುಪಲಿದೆ. ಜಿದ್ದಾದಿಂದ ಮಧ್ಯಾಹ್ನ 1-45 ಕ್ಕೆ ಹೊರಟು ರಾತ್ರಿ 9.40 ಕ್ಕೆ ಮಂಗಳೂರು ತಲುಪಲಿದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ನ ವೆಬ್ಸೈಟ್ನಲ್ಲಿ, ಮಂಗಳೂರಿನಿಂದ 30,812 ರೂಪಾಯಿ ಹಾಗೂ ಜಿದ್ದಾದಿಂದ 16,121 ರೂಪಾಯಿ ಟಿಕೆಟ್ ದರ ನಿಗದಿಪಡಿಸಲಾಗಿದೆ.
ಉಮ್ರಾ ಹಾಗೂ ಇತರ ಯಾತ್ರಿಕರ ಅನುಕೂಲಕ್ಕಾಗಿ ಮಂಗಳೂರಿನಿಂದ ಜಿದ್ದಾ ಅಥವಾ ಮದೀನಾಕ್ಕೆ ನೇರ ವಿಮಾನ ಯಾನದ ವ್ಯವಸ್ಥೆ ಕಲ್ಪಿಸುವಂತೆ ಹಜ್ ಮತ್ತು ಉಮ್ರಾ ಟೂರ್ ಏಜೆನ್ಸಿಗಳು ಸೇರಿದಂತೆ ವಲಸಿಗ ಕನ್ನಡಿಗರು ಹಾಗೂ ನೆರೆರಾಜ್ಯ ಕೇರಳದ ಕಾಸರಗೋಡು ಜಿಲ್ಲೆಯ ಪ್ರಯಾಣಿಕರ ಬೇಡಿಕೆಯಾಗಿತ್ತು.
ಇಲ್ಲಿಂದ ಉಮ್ರಾ ನಿರ್ವಹಿಸಲು ಬೆಂಗಳೂರು, ಕೋಝಿಕ್ಕೋಡ್ ಅಥವಾ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅವಲಂಬಿಸಬೇಕಿತ್ತು. ಇದಲ್ಲದೆ ಅನಿವಾಸಿ ಭಾರತೀಯ ಉದ್ಯಮಿಗಳು, ಸೌದಿಯಲ್ಲಿರುವ ಉದ್ಯೋಗಸ್ಥರು ಹಾಗೂ ಇತರ ಪ್ರಯಾಣಿಕರಿಗೆ ಮಂಗಳೂರು ಜಿದ್ದಾ ನೇರ ಬಹಳ ಪ್ರಯೋಜನಕಾರಿ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ