ಉಡುಪಿ: ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ನಿಷೇಧಿಸಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ಹನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರೆದಿದ್ದು, ಈ ನಡುವಲ್ಲೇ ವಿದ್ಯಾರ್ಥಿನಿ ಹಾಜರಾ ಶಿಫಾ ಅವರ ಪೋಷಕರು ನಡೆಸುತ್ತಿರುವ ಮಲ್ಪೆಯ ರೆಸ್ಟೋರೆಂಟ್ ಮೇಲೆ ಸೋಮವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಹಾಜ್ರಾ ಸಹೋದರ ಸೈಫ್ ಮೇಲೆ ಹಲ್ಲೆ ನಡೆದಿದ್ದು, ಅವರನ್ನು ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಹೋಟೆಲ್‌ನ ಕಿಟಕಿ ಗಾಜುಗಳನ್ನು ಒಡೆದು ಹಾಕಲಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿಫಾ ಅವರ ತಂದೆ ಹೈದರ್ ಅಲಿ ಅವರು ಮಲ್ಪೆ ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದು, ಈ ಹೋಟೆಲ್’ಗೆ ತೆರಳಿರುವ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ವೇಳೆ ಶಿಫಾ ಅವರ ಸಲಹೋದರ ಸೈಫ್ (20) ಅವರು ಗಾಯಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಮಲ್ಪೆ ಪೊಲೀಸರು ಸ್ಥಳದಲ್ಲಿ ನೆರೆದಿದ್ದ ಜನರನ್ನು ಚದುರಿಸಿದ್ದಾರೆ. ಇನ್ನು ಘಟನೆ ಸಂಬಂಧ ಶಿಫಾ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಹಕ್ಕಿಗಾಗಿ ಧನಿ ಎತ್ತುವುದು ತಪ್ಪೇ, ಸಂಘ ಪರಿವಾರದ ಗೂಂಡಾಗಳ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಬೇಕು’ ಎಂದು ಹಿಜಾಬ್ ಪರ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿ ಹಾಜ್ರಾ ಶಿಫಾ ಟ್ವಿಟ್ ಮಾಡಿದ್ದಾರೆ.
ತನ್ನ ಸಹೋದರ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದೆ. ನನ್ನ ಹಕ್ಕಾಗಿರುವ ಹಿಜಾಬ್ ಪರವಾಗಿ ನಾನು ನಿಂತಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ನಮ್ಮ ಆಸ್ತಿಪಾಸ್ತಿಗಳು ಹಾನಿಗೊಳಗಾಗಿವೆ. ನಾನೇಕೆ ನನ್ನ ಹಕ್ಕನ್ನು ಕೇಳಬಾರದು? ಮುಂದಿನ ಬಲಿಪಶು ಯಾರಾಗಲಿದ್ದಾರ? ಸಂಘ ಪರಿವಾರದ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಾನು ಆಗ್ರಹಿಸುತ್ತೇನೆಂದು ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ