janadhvani

Kannada Online News Paper

ಸಚಿವ ಈಶ್ವರಪ್ಪರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಎಸ್ಡಿಪಿಐ ಪ್ರತಿಭಟನೆ

ದೇರಳಕಟ್ಟೆ :ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಶಿವಮೊಗ್ಗದಲ್ಲಿ ಗಲಭೆಗೆ ಪ್ರಚೋದನೆ ಮತ್ತು ಹಿಂಸಾಚಾರಕ್ಕೆ ನೇತ್ರತ್ವ ನೀಡಿದ ಸಚಿವ ಈಶ್ವರಪ್ಪರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಕ್ಷೇತ್ರಾಧ್ಯಕ್ಷರಾದ ಇರ್ಷಾದ್ ಅಜಿನಡ್ಕ ರವರ ನೇತ್ರತ್ವದಲ್ಲಿ ದೇರಳಕಟ್ಟೆಯಲ್ಲಿ ಪ್ರತಿಭಟನೆ ನಡೆಯಿತು.

ಈ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ SDPI ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ರವರು ಮಾತನಾಡಿದರು. ಈ ಸಂದರ್ಭದಲ್ಲಿ SDPI ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಅಶ್ರಫ್ ಮಂಚಿ, ಕ್ಷೇತ್ರ ಸಮಿತಿಯ ಸದಸ್ಯರಾದ ಅಬ್ಬಾಸ್ ಕಿನ್ಯಾ, ಲತೀಫ್ ಕೋಡಿಜಾಲ್, ಮತ್ತು ಪಕ್ಷದ ಬ್ಲಾಕ್ ನಾಯಕರುಗಳು, ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

ಪ್ರತಿಭಟನೆ ಉದ್ದಕ್ಕೂ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಈಶ್ವರಪ್ಪನ ವಿರುದ್ಧ ಘೋಷಣೆ ಕೂಗಿ, ಮಾನ್ಯ ತಹಶೀಲ್ದಾರ್ ಮುಖಾಂತರ ಗೌರವಾನ್ವಿತ ಕರ್ಣಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗು ಗೌರವಾನ್ವಿತ ಕರ್ಣಾಟಕ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ರವರಿಗೆ ಈಶ್ವರಪ್ಪರನ್ನು ಶಾಸಕ ಸ್ಥಾನದಿಂದ ಉಚ್ಚಾಟಿಸಲು ಮನವಿ ಮಾಡಲಾಯಿತು.
ಪ್ರತಿಭಟನಾಕಾರರನ್ನು ಕ್ಷೇತ್ರ ಕಾರ್ಯದರ್ಶಿ ಝಾಹಿದ್ ಮಲಾರ್ ಸ್ವಾಗತಿಸಿ, ಉಬೈದ್ ಅಮ್ಮೆಂಬಳ ಧನ್ಯವಾದಗೈದರು.

error: Content is protected !! Not allowed copy content from janadhvani.com