ಉಡುಪಿ: ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಬಂದ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಂಶುಪಾಲರೇ ಪೊಲೀಸ್ ದೂರು ಕೊಡುವುದಾಗಿ ಎಚ್ಚರಿಸಿದ ಘಟನೆ ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಪೈಕಿ ದ್ವಿತೀಯ ಪಿಯು ವಿಜ್ಞಾನ ವಿಭಾಗದ ಮೂವರು ವಿದ್ಯಾರ್ಥಿನಿಯರಿಗೆ ಸೋಮವಾರದ ಪ್ರಾಕ್ಟಿಕಲ್ ಪರೀಕ್ಷೆಗೆ ಅವಕಾಶ ನಿರಾಕರಿಸಲಾಗಿದೆ. ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಕ್ಕೆ ಅವರನ್ನು ಪರೀಕ್ಷೆಗ ಕೂರಿಸಲು ಅವಕಾಶ ನಿರಾಕರಿಸಿದ್ದಲ್ಲದೇ, ಹೊರಹೋಗುವಂತೆ ಪ್ರಾಂಶುಪಾಲರು ಎಚ್ಚರಿಕೆ ನೀಡಿ ಹೊರಗೆ ಕಳಿಸಿದ್ದಾರೆ ಎನ್ನಲಾಗಿದೆ.
ಹಿಜಾಬ್ ಧರಿಸಿಯೇ ಕಾಲೇಜಿಗೆ ಬಂದಿರುವ ಕಾರಣ ಪರೀಕ್ಷೆಗೆ ಹಾಜರಾಗಲು ಅವಕಾಶ ನಿರಾಕರಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ವಿದ್ಯಾರ್ಥಿನಿ ಅಲ್ಮಾಸ್ ಎ.ಎಚ್. ಟ್ವೀಟ್ ಮಾಡಿದ್ದು, ‘ನಮ್ಮ ಪೈಕಿ ನಾನು ಸೇರಿದಂತೆ ಮೂವರು ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಿಗೆ ಇಂದಿನ ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಪ್ರಾಂಶುಪಾಲರು ಅವಕಾಶ ನೀಡಿಲ್ಲ. ನಮ್ಮ ಮೇಲೆ ಪೊಲೀಸ್ ದೂರು ನೀಡುವುದಾಗಿ ಹಿಂದೆ ಕಳುಹಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.
‘ನಾವು ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಉತ್ಸುಕರಾಗಿಯೇ ಕಾಲೇಜಿಗೆ ಹೋಗಿದ್ದೆವು. ಕಾಲೇಜು ತಲುಪಿದಾಗ ನಮ್ಮ ಪ್ರಾಂಶುಪಾಲರು ನೀವು ಇಲ್ಲಿಂದ ಐದು ನಿಮಿಷದಲ್ಲಿ ಹೊರಡಬೇಕು. ಇಲ್ಲವಾದಲ್ಲಿ ನಾನು ಪೊಲೀಸ್ ಕಂಪ್ಲೇಂಟ್ ಕೊಡುತ್ತೇನೆ ಎಂದು ಎಚ್ಚರಿಸಿದ್ದಾರೆ’ ಎಂದು ಅಲ್ಮಾಸ್ ಹೇಳಿದ್ದಾರೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡುವಂತೆ ಹೈಕೋರ್ಟ್ ಮೆಟ್ಟಿಲು ಏರಿರುವವರ ಪೈಕಿ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಅಲ್ಮಾಝ್, ಹಝ್ರ ಶಿಫಾ ಹಾಗೂ ಬೀಬಿ ಆಯಿಶಾ ಅವರು ದ್ವಿತೀಯ ಪಿಯು ವಿದ್ಯಾರ್ಥಿನಿಯರಾಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್