ಶ್ರೀನಗರ: ಕಠುವಾದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಗೆ ವಿಶೇಷ ತ್ವರಿತಗತಿಯ ನ್ಯಾಯಾಲಯ ಸ್ಥಾಪಿಸುವಂತೆ ಮನವಿ ಮಾಡಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ಗೆ ಪತ್ರ ಬರೆದಿದ್ದಾರೆ.
ಪ್ರಕರಣದಲ್ಲಿ ಆರೋಪಿಗಳಾಗಿರುವ ಪೊಲೀಸರನ್ನು ಕರ್ತವ್ಯದಿಂದ ವಜಾ ಮಾಡಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಬಕ್ರೆವಾಲಾ ಸಮುದಾಯಕ್ಕೆ ಸೇರಿದ 8 ವರ್ಷದ ಬಾಲಕಿಯನ್ನು ದೇವಸ್ಥಾನದಲ್ಲಿ 5 ದಿನಗಳ ಕಾಲ ಬಂಧಿಸಿ ಸತತ ಅತ್ಯಾಚರ ಎಸಗಿ ಹತ್ಯೆ ಮಾಡಿದ ಪ್ರಕರಣ ದೇಶದಾದ್ಯಂತ ಚರ್ಚೆಯಾಗುತ್ತಿದೆ.