janadhvani

Kannada Online News Paper

ಬಿಜೆಪಿ ಅಧಿಕಾರದಲ್ಲಿರುವ ಕಡೆಗಳಲ್ಲಿ ಮಹಿಳೆಯರು ಸುರಕ್ಷಿತರಲ್ಲ -ಏ.17ರಂದು ದೇಶದಾದ್ಯಂತ ಕರಾಳ ದಿನ

ಮಂಗಳೂರು: ‘ಬಿಜೆಪಿ ಅಧಿಕಾರದಲ್ಲಿ ಇರುವ ಎಲ್ಲ‌ ಕಡೆಗಳಲ್ಲಿ ಮಹಿಳೆಯರು ತೊಂದರೆಯಲ್ಲಿ ಇದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದರೆ ಮಹಿಳೆಯರು, ಮಕ್ಕಳಿಗೆ ತೊಂದರೆ ಕಟ್ಟಿಟ್ಟ ಬುತ್ತಿ’ ಎಂದು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಜಾನೆಟ್ ಡಿಸೋಜ ಟೀಕಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ಜಮ್ಮು ಮತ್ತು ಕಾಶ್ಮೀರದ ಕಠುವಾದಲ್ಲಿ ಎಂಟು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಹಾಗೂ ಉತ್ತರ ಪ್ರದೇಶದ ಉನ್ನಾವ್‌ನಲ್ಲಿ ಬಿಜೆಪಿ ಶಾಸಕನೇ ಯುವತಿ ಮೇಲೆ ಅತ್ಯಾಚಾರ ಎಸಗಿರುವುದು ಬಿಜೆಪಿ ಅಧಿಕಾರದಲ್ಲಿ ಇರುವೆಡೆ ಮಹಿಳೆ, ಮಕ್ಕಳಿಗೆ ರಕ್ಷಣೆ ಇಲ್ಲ ಎಂಬುದಕ್ಕೆ ಸಾಕ್ಷಿ’ ಎಂದರು.

ಕಟುವಾ ಮತ್ತು ಉನ್ನಾವ್ ಘಟನೆಗಳನ್ನು ಖಂಡಿಸಿ ಏಪ್ರಿಲ್ 17ರಂದು ದೇಶದಾದ್ಯಂತ ಕರಾಳ ದಿನ ಆಚರಿಸಲಾಗುವುದು. ಕರ್ನಾಟಕದ ವಿವಿಧ ಕಡೆಗಳಲ್ಲಿ ಭಾನುವಾರ ಸಂಜೆ ಮೋಂಬತ್ತಿ ಬೆಳಗಿಸಿ ಪ್ರತಿಭಟಿಸಲಾಗುವುದು ಎಂದು ಹೇಳಿದರು.