ರಿಯಾದ್: ಸೌದಿ-ಬಹ್ರೇನ್ ಕಾಸ್ವೇಯಲ್ಲಿ ಪ್ರಯಾಣಿಸಲು ಬೂಸ್ಟರ್ ಡೋಸ್ ಕಡ್ಡಾಯವಾಗಿದೆ ಎಂದು ಕಾಸ್ವೇ ಅಥಾರಿಟಿ ಹೇಳಿದೆ. ಕಾಸ್ವೇಯಲ್ಲಿ ಪ್ರಯಾಣಿಸುವವರು ಮತ್ತು ದೇಶವನ್ನು ಪ್ರವೇಶಿಸುವವರು ಮೂರನೇ ಡೋಸ್ ಪಡೆದಿರಬೇಕು ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.
ಮೂರು ತಿಂಗಳೊಳಗೆ ಎರಡನೇ ಡೋಸ್ ಪಡೆದವರಿಗೆ ಮತ್ತು ಕೋವಿಡ್ ಲಸಿಕೆ ಸ್ವೀಕರಿಸುವುದರಲ್ಲಿ ವಿಶೇಷ ವಿನಾಯ್ತಿ ಲಭಿಸಿದವರಿಗೆ ಇದರಿಂದ ವಿನಾಯಿತಿ ನೀಡಲಾಗಿದೆ. ಕೋವಿಡ್ ಕವರೇಜ್ನೊಂದಿಗೆ ಅನುಮೋದಿತ ವೈದ್ಯಕೀಯ ವಿಮೆಯನ್ನು ಹೊಂದಿರುವ ಹನ್ನೆರಡು ವರ್ಷದೊಳಗಿನ ಮಕ್ಕಳು ಸಹ ವಿನಾಯಿತಿಗೆ ಅರ್ಹರಾಗಿರುತ್ತಾರೆ.
ಸೌದಿ ಅರೇಬಿಯಾಕ್ಕೆ ಪ್ರವೇಶಿಸಲು ಆಂತರಿಕ ಸಚಿವಾಲಯವು ಹೊಸ ರಿಯಾಯಿತಿಗಳನ್ನು ನೀಡುತ್ತಿದ್ದಂತೆ ಕಾಸ್ವೇ ಪ್ರಾಧಿಕಾರದ ವಿವರಣೆಯು ಬಂದಿದೆ. ಪ್ರಸ್ತುತ, ದೇಶಕ್ಕೆ ಪ್ರವೇಶಿಸಲು ಲಸಿಕೆ ಕಡ್ಡಾಯವಲ್ಲ. ಅಂತಹವರಿಗೆ ಈ ಹಿಂದೆ ಜಾರಿಯಲ್ಲಿದ್ದ ಕ್ವಾರಂಟೈನ್ ವ್ಯವಸ್ಥೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ಪಿಸಿಆರ್ ಪರೀಕ್ಷೆಯ ಫಲಿತಾಂಶದ ಅಗತ್ಯವಿಲ್ಲ.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ