ಬೆಂಗಳೂರು: ರಾಜ್ಯದ ಕೆಲವು ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಗಳಿಗೆ ಶಿರವಸ್ತ್ರ (ಹಿಜಾಬ್) ವನ್ನು ನಿರ್ಬಂಧಿಸಿದ್ದ ಕ್ರಮವನ್ನು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿಗೆ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಗಳ ವಿಚಾರಣೆ ಈಗಾಗಲೇ ಹೈಕೋಟ್‌ರ್ನಲ್ಲಿ ಪೂರ್ಣಗೊಂಡಿದ್ದು, ನಾಳೆ ಬೆಳಗ್ಗೆ 10.30ಕ್ಕೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.
ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ನ್ಯಾಯಪೀಠದಲ್ಲಿ ಉಡುಪಿಯ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರೇಷಮ್ ಹಾಗೂ ಇತರೆ ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿದ್ದ 9 ರಿಟ್ ಅರ್ಜಿಗಳು ಹಾಗೂ 20ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಎಲ್ಲ ಅರ್ಜಿದಾರರ ಪರ ವಕೀಲರ ಹಾಗೂ ಸರಕಾರಿ ಪರ ವಕೀಲರ ವಾದವನ್ನು ಆಲಿಸಿದ್ದ ಹೈಕೋರ್ಟ್ ತೀರ್ಪುನ್ನು ಕಾಯ್ದಿರಿಸಿತ್ತು.
ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರವರ ಪೂರ್ಣ ಪೀಠ ತೀರ್ಪು ನೀಡಲಿದೆ.
ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅವಶ್ಯಕ ಧಾರ್ಮಿಕ ಆಚರಣೆಯ ಭಾಗವೇ.? ಮತ್ತು ಈ ವಿಚಾರದಲ್ಲಿ ಸರ್ಕಾರ ಬಯಸಿದರೆ ಮಧ್ಯಪ್ರವೇಶ ಮಾಡಬಹುದೇ? ಎನ್ನುವುದು ಕೋರ್ಟ್ ಮುಂದೆ ಇರುವ ಪ್ರಮುಖ ಪ್ರಶ್ನೆಗಳಾಗಿವೆ. ಜತೆಗೆ ಹಿಜಾಬ್ ಧರಿಸುವುದನ್ನು ಸಂವಿಧಾನದ 19 (1) (a) ಪರಿಚ್ಛೇದದ ಅಡಿ ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಪರಿಗಣಿಸಬೇಕೇ ಅಥವಾ 19 (2) ರ ಅಡಿ ನಿರ್ಬಂಧಗಳಿಗೆ ಒಳಪಡಿಸಬಹುದೇ ಎಂಬುದನ್ನು ಕೂಡ ನಿರ್ಧರಿಸಬೇಕಿದೆ.
ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಬಳಿಕ ಕರ್ನಾಟಕದಾದ್ಯಂತ ಹಬ್ಬಿ ಇದೀಗ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸದ್ದು ಮಾಡಿದೆ. ಹಿಜಾಬ್ ವಿವಾದ ಹಿನ್ನೆಲೆ ಹೈಕೋರ್ಟ್ನಲ್ಲಿ 11 ದಿನಗಳ ಕಾಲ ಚರ್ಚೆ ನಡೆಸಿ ತೀರ್ಪು ಕಾಯ್ದಿರಿಸಲಾಗಿತ್ತು. ಸದ್ಯ ನಾಳೆ ಬೆಳಗ್ಗೆ 10.30ಕ್ಕೆ ಹೈಕೋರ್ಟ್ ಪೂರ್ಣ ಪೀಠದಿಂದ ತೀರ್ಪು ಹೊರ ಬೀಳಲಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ