ಬೆಂಗಳೂರು: ರಾಜ್ಯದ ಮದರಸಗಳಲ್ಲಿ ಕನ್ನಡ ಕಡ್ಡಾಯಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆಯೇ? ಎಂಬ ಪ್ರಶ್ನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಉತ್ತರ ನೀಡಿದ್ದು, ಅವು ಧಾರ್ಮಿಕ ಸಂಸ್ಥೆಗಳು ಆಗಿರುವುದರಿಂದ ಪರಿಶೀಲನೆ ನಡೆಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ವಿಧಾನಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಅವರು ಈ ಕುರಿತಾದ ಪ್ರಶ್ನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕೇಳಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮದರಸಗಳಲ್ಲಿ ಕನ್ನಡ ಕಡ್ಡಾಯದ ಅನುಸರಣೆ ಆಗುತ್ತಿರುವ ಕುರಿತಾಗಿ ಪರಿಶೀಲನೆ ನಡೆಸಲಾಗುತ್ತಿದೆಯೇ? ಎಂಬ ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ಸಚಿವ ಸುನೀಲ್ ಕುಮಾರ್ ಉತ್ತರ ನೀಡಿ, ಮದರಸಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನಕ್ಕೆ ಒಳಪಡುವುದಿಲ್ಲ. ಅವು ಧಾರ್ಮಿಕ ಸಂಸ್ಥೆಗಳು ಆಗಿರುವುದರಿಂದ ಪರಿಶೀಲನೆ ನಡೆಸಲಾಗುವುದಿಲ್ಲ ಎಂದಿದ್ದಾರೆ.
ರಾಜ್ಯದ ಮದರಸಾಗಳಲ್ಲಿ ಸಹಿಷ್ಣುತೆ, ಸೌಹಾರ್ದತೆ ಕಲಿಸಲಾಗುತ್ತಿದೆ, ಮೂಲಭೂತವಾದವನ್ನಲ್ಲ
ಮುಂದುವರಿದು, ಮದರಸಗಳಲ್ಲಿ ಕನ್ನಡ ಹೇಳಿಕೊಡಲು ಯಾವ ಅರ್ಹತೆ ಹೊಂದಿರುವ ಶಿಕ್ಷಕರನ್ನು ನೇಮಿಸಲಾಗಿದೆ? ಈ ಕುರಿತು ಸರ್ಕಾರದ ನಿಲುವೇನು? ಎಂಬ ಪ್ರಶ್ನೆಗೆ, ಮದರಸಗಳು ಧಾರ್ಮಿಕ ಸಂಸ್ಥೆಗಳು ಆಗಿರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶಿಕ್ಷಕರನ್ನು ನೇಮಿಸುವ ಪ್ರಮೇಯ ಇರುವುದಿಲ್ಲ ಎಂದು ಉತ್ತರಿಸಲಾಗಿದೆ.
ಸದ್ಯ ರಾಜ್ಯದ ಮದರಸಗಳಲ್ಲಿ ಉರ್ದು, ಅರಬಿ ಹಾಗೂ ಸ್ಥಳೀಯ ಭಾಷೆಗಳಲ್ಲಿ ಶಿಕ್ಷಣ ನೀಡಲಾಗುತ್ತದೆ. ಆದರೆ ಮದರಸಗಳಲ್ಲಿ ಕನ್ನಡ ಕಡ್ಡಾಯಕ್ಕೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಸರ್ಕಾರ ಈ ಮೂಲಕ ಸ್ಪಷ್ಟಪಡಿಸಿದೆ. ರವಿ ಕುಮಾರ್ ಅವರು ರಾಜ್ಯದ ಮದರಸಾಗಳಲ್ಲಿ ಮೂಲಭೂತವಾದದ ಶಿಕ್ಷಣ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಯನ್ನು ಕೇಳಿದ್ದರು. ಆದರೆ, ಮದರಸಗಳಲ್ಲಿ ಮೂಲಭೂತವಾದದ ಶಿಕ್ಷಣ ನೀಡುತ್ತಿಲ್ಲ ಹಾಗೂ ಇತರ ದೇವರನ್ನು ಆರಾಧಿಸುವವರನ್ನು ಕೊಲ್ಲಬೇಕು ಎಂದು ಸಣ್ಣ ಮಕ್ಕಳಿಗೆ ಕಲಿಸಲಾಗುತ್ತಿಲ್ಲ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿತ್ತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ