ನವದೆಹಲಿ, ಮಾ. 16: ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಷಯಕ್ಕೆ ಸಂಬಂಧಿಸಿದಂತೆ ನಿನ್ನೆ (ಮಾರ್ಚ್ 15ರಂದು) ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ತುರ್ತಾಗಿ ವಿಚಾರಣೆ ನಡೆಸಬೇಕೆಂದು ಕೂಡ ಮನವಿ ಮಾಡಿಕೊಳ್ಳಲಾಗಿದೆ. ಆದರೆ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿಲ್ಲ. ಹೋಳಿ ಹಬ್ಬದ ಬಳಿಕ ವಿಚಾರಣೆಗೆ ದಿನಾಂಕ ನಿಗಧಿ ಮಾಡಲಾಗುವುದು ಎಂದು ತಿಳಿಸಿದೆ. ನಿನ್ನೆ ಹೈಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ನಿಬಾ ನಾಜ್ ಎಂಬ ವಿದ್ಯಾರ್ಥಿನಿ ಸುಪ್ರೀಂ ಕೋರ್ಟಿನಲ್ಲಿ ವಕೀಲ ಅನಸ್ ತನ್ವೀರ್ ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದರು.
ಉಡುಪಿಯಲ್ಲಿ ಪ್ರತಿಭಟನೆ ಮಾಡಿದ ಆರು ವಿದ್ಯಾರ್ಥಿನಿಯರ ಪರ ಹೈಕೋರ್ಟಿನಲ್ಲಿ ವಾದ ಮಂಡಿಸಿದ್ದ ವಕೀಲರಾದ ಸಂಜಯ್ ಹೆಗಡೆ ಮತ್ತು ದೇವದತ್ ಕಾಮತ್ ಅವರು ಇಂದು ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದರು. ಅರ್ಜಿ ಸಲ್ಲಿಕೆಯ ಬಳಿಕ ಓಪನ್ ಕೋರ್ಟಿನಲ್ಲಿ ಮೆನ್ಷನ್ ಮಾಡಿ ತುರ್ತಾಗಿ ವಿಚಾರಣೆ ನಡೆಸಬೇಕೆಂದು ಮನವಿ ಮಾಡಿಕೊಂಡರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಪ್ರೀಂ ಕೋರ್ಟ್ ಹೋಳಿ ಹಬ್ಬದ ಬಳಿಕ ವಿಚಾರಣೆಗೆ ದಿನಾಂಕ ನಿಗಧಿ ಮಾಡಲಾಗುವುದು ಎಂದು ಹೇಳಿತು. ಆಗ ವಕೀಲ ಸಂಜಯ್ ಹೆಗಡೆ ಸೋಮವಾರವಾದರೂ ವಿಚಾರಣೆ ನಡೆಸಿ ಎಂದು ಕೇಳಿಕೊಂಡರು. ಸುಪ್ರೀಂ ಕೋರ್ಟ್ ಅದಕ್ಕೂ ಮಾನ್ಯ ಮಾಡಲಿಲ್ಲ.
ಇತರರಿಂದಲೂ ಪ್ರತ್ಯೇಕ ಅರ್ಜಿಗಳ ಸಲ್ಲಿಕೆ ಸಾಧ್ಯತೆ
ಅಖಿಲ ಭಾರತ ಯುವ ಕಾಂಗ್ರೆಸ್ ಈ ಹಿಂದೆಯೇ ಸುಪ್ರೀಂ ಕೋರ್ಟ್ ಕದ ತಟ್ಟಿತ್ತು. ಈಗ ರಾಜ್ಯ ಹೈಕೋರ್ಟ್ ತೀರ್ಪು ಹೊರಬಿದ್ದಿರುವ ಹಿನ್ನಲೆಯಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಇದೇ ರೀತಿ ಹಿಂದೆ ಅರ್ಜಿ ಸಲ್ಲಿಸಿದ್ದ ರಾಜ್ಯದ ವಕ್ಫ್ ಬೋರ್ಡ್, ಡಾ. ಜೆ ಹಳ್ಳಿ ಫೆಡರೇಷನ್ ಆಫ್ ಮಸೀದ್, ಮದ್ರಾಸ್ ಅ್ಯಂಡ್ ವಕ್ಫ್ ಇನ್ಸ್ಟಿಟ್ಯೂಟಿಷನ್ ಗಳು ಕೂಡ ಪ್ರತ್ಯೇಕವಾದ ಅರ್ಜಿಗಳನ್ನು ಸಲ್ಲಿಸುವ ಸಾಧ್ಯತೆಗಳಿವೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ