janadhvani

Kannada Online News Paper

ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ವಿಷಾದ ವ್ಯಕ್ತಪಡಿಸಿ ನಾಳೆ ಕರ್ನಾಟಕ ಬಂದ್

ಬಂದ್ ಶಾಂತಿಯುತವಾಗಿರಬೇಕು. ಬಲವಂತದ ಬಂದ್ ನಡೆಸಬಾರದು. ಜಾಥಾ, ಮೆರವಣಿಗೆ ಕೂಡ ನಡೆಸಬಾರದು

ಕರ್ನಾಟಕ ಉಚ್ಛ ನ್ಯಾಯಾಲಯ ಹಿಜಾಬ್‌ ಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಬಗ್ಗೆ ವಿಷಾದ ವ್ಯಕ್ತಪಡಿಸಿ ನಾಳೆ 17ನೇ ಮಾರ್ಚ್ 2022 ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅತ್ಯಗತ್ಯ ಭಾಗವಲ್ಲ ಎಂದು ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಖಂಡಿಸಿ ಕರ್ನಾಟಕ ಬಂದ್ ನಡೆಸಬೇಕು ಎಂದು ಅಮೀರ್ ಎ ಶರೀಯತ್ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿದ್ದಾರೆ.

ಮಾರ್ಚ್ 17 ಗುರುವಾರ ಎಲ್ಲರೂ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ತಮ್ಮ ವಿರೋಧವನ್ನು ವ್ಯಕ್ತಿಪಡಿಸಬೇಕು. ನ್ಯಾಯಕ್ಕಾಗಿ ಒತ್ತಾಯಿಸಿ ಈ ಬಂದ್ ಕರೆ ನೀಡಲಾಗಿದ್ದು, ಬಂದ್ ಶಾಂತಿಯುತವಾಗಿರಬೇಕು ಎಂದು ಅವರು ಹೇಳಿದ್ದಾರೆ. ಬಲವಂತದ ಬಂದ್ ನಡೆಸಬಾರದು. ಜಾಥಾ, ಮೆರವಣಿಗೆ ಕೂಡ ನಡೆಸಬಾರದು ಎಂದು ಅವರು ಮನವಿ ಮಾಡಿದ್ದಾರೆ.