ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯರಾವ್‌ಗೆ ದಕ್ಷಿಣ ಕನ್ನಡ ಜಿಲ್ಲಾ ನಾಲ್ಕನೇ ಹೆಚ್ಚುವರಿ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಸ್ಫೋಟಕ ತಡೆ ಕಾಯ್ದೆಯಡಿ 5 ವರ್ಷ ಹಾಗೂ ಯುಎಪಿಎ ಕಾಯ್ದೆಯಡಿ 20 ವರ್ಷ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಘಟನೆಯ ವಿವರ
ರಿಕ್ಷಾವೊಂದರಲ್ಲಿ ಚಾಲಕ ಸೇರಿದಂತೆ ಇಬ್ಬರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆ ಪೈಕಿ ಆದಿತ್ಯ ರಾವ್ ಆಟೋ ರಿಕ್ಷಾದಿಂದ ಇಳಿದು ಸ್ಫೋಟಕ ತುಂಬಿದ ಬ್ಯಾಗನ್ನು ನಿರ್ಗಮನ ದ್ವಾರದ ಸಮೀಪದ ಟಿಕೆಟ್ ಕೌಂಟರ್ ಬಳಿಯಿರುವ ಆಸನದ ಮೇಲಿರಿಸಿ ಅಲ್ಲಿಂದ ಕಾಲ್ಕಿತ್ತಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು.
ಆ ಬಳಿಕ ಆರೋಪಿ ಆದಿತ್ಯ ರಾವ್ ಬೆಂಗಳೂರಿಗೆ ತೆರಳಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ. ಆತನನ್ನು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು. ನಂತರ ಮಂಗಳೂರು ಪೊಲೀಸ್ ತಂಡ ಬೆಂಗಳೂರಿಗೆ ತೆರಳಿ ಆತನನ್ನು ಬಂಧಿಸಿ ಮಂಗಳೂರಿಗೆ ಕರೆ ತಂದಿತ್ತು.
ವಿಮಾನ ನಿಲ್ದಾಣದಲ್ಲಿ ಆತ ಇರಿಸಿ ಹೋಗಿದ್ದ ಬ್ಯಾಗಿನಲ್ಲಿ ಕಂಡು ಬಂದ ಶಂಕಾಸ್ಪದ ವಸ್ತುಗಳು ಸ್ಫೋಟಕಗಳಾಗಿತ್ತು ಎಂಬುದು ಎಫ್ ಎಸ್ಎಲ್ ಪರೀಕ್ಷೆಯಿಂದ ಸಾಬೀತಾಗಿತ್ತು. ಆದಿತ್ಯ ರಾವ್ ವಿರುದ್ಧ 700 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತನಿಖಾಧಿಕಾರಿಗಳು ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಆದಿತ್ಯ ರಾವ್ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅನ್ವಯ ಪ್ರಕರಣ ದಾಖಲಿಸಿ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಇದೀಗ ನ್ಯಾಯಾಲಯ ಆತನನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿ 20 ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ