janadhvani

Kannada Online News Paper

ಕಾಪು ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ- ಮೂವರು ಮರಣ

ಉಡುಪಿ,ಮಾ.21:ಇಲ್ಲಿನ ಕಾಪು ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರು ಮೃತಪಟ್ಟ ಘಟನೆ ಕಾಪು ಮಲ್ಲಾರು ಸಲಫಿ ಮಸೀದಿ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಸಜೀವ ದಹನವಾಗಿದ್ದರು. ಇದೀಗ ಗಂಭೀರ ಗಾಯಗೊಂಡಿದ್ದ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರನ್ನು ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್, ರಜಾಕ್‌ ಮಲ್ಲಾರ್‌ ಹಾಗೂ ನಿಯಾಝ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಪಾಲುದಾರ ಹಸನಬ್ಬ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.