ಹೊಸದಿಲ್ಲಿ,ಮಾರ್ಚ್.21: ದಿಲ್ಲಿಯಿಂದ ದೋಹಾಗೆ ತೆರಳುತ್ತಿದ್ದ ಕತಾರ್ ಏರ್‌ವೇಸ್ ವಿಮಾನದಲ್ಲಿ ಭಾರೀ ಅವಘಡವೊಂದು ತಪ್ಪಿದೆ. ವಿಮಾನ ಹಾರಾಟದ ಸಮಯದಲ್ಲಿ ಇದ್ದಕ್ಕಿದ್ದಂತೆ ವಿಮಾನದಿಂದ ಹೊಗೆ ಬರಲಾರಂಭಿಸಿತು, ಬಳಿಕ ಫ್ಲೈಟ್ ಅನ್ನು ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. 100 ಪ್ರಯಾಣಿಕರಿದ್ದ ಈ ವಿಮಾನದಲ್ಲಿ ತುರ್ತು ಸಂದರ್ಭದಲ್ಲಿ ವಿಮಾನವನ್ನು ಲ್ಯಾಂಡ್ ಮಾಡುವ ಮೂಲಕ ಎಲ್ಲ ಪ್ರಯಾಣಿಕರ ಪ್ರಾಣವನ್ನು ರಕ್ಷಣೆ ಮಾಡಲಾಗಿದೆ.
ಕತಾರ್ ಏರ್‌ವೇಸ್‌ನ QR579 ವಿಮಾನವು ದೆಹಲಿಯಿಂದ ದೋಹಾಗೆ ಟೇಕ್ ಆಫ್ ಆಗಿತ್ತು. ಈ ವೇಳೆ ವಿಮಾನದ ಕಾರ್ಗೋ ಹೋಲ್ಡ್‌ನಿಂದ ಇದ್ದಕ್ಕಿದ್ದಂತೆ ಹೊಗೆ ಬರಲಾರಂಭಿಸಿತು. ಇದಾದ ನಂತರ ವಿಮಾನವನ್ನು ಪಾಕಿಸ್ತಾನಕ್ಕೆ ತಿರುಗಿಸಲಾಯಿತು. ಬಳಿಕ ಕರಾಚಿಯಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯ ಕುರಿತು ಕತಾರ್ ಏರ್‌ವೇಸ್ ಪರವಾಗಿ ಹೇಳಿಕೆಯನ್ನು ನೀಡಲಾಗಿದ್ದು, ವಿಮಾನದಲ್ಲಿನ ಸಮಸ್ಯೆಯನ್ನು ಪರಿಶೀಲನೆ ಮಾಡಲಾಗುತ್ತಿದೆ. ಪ್ರಯಾಣಿಕರನ್ನು ಮತ್ತೊಂದು ವಿಮಾನದ ಮೂಲಕ ದೋಹಾಗೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಏರ್‌ವೇಸ್ ಹೇಳಿದೆ. ಅಲ್ಲದೆ, ಪ್ರಯಾಣಿಕರಿಗೆ ಕತಾರ್ ಏರ್‌ವೇಸ್ ಅನಾನುಕೂಲತೆಗಾಗಿ ಕ್ಷಮೆಯಾಚಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ