ಬೆಂಗಳೂರು: ರಾಜ್ಯದಲ್ಲಿ ಭುಗಿಲೆದ್ದಿರುವ ಕೋಮು ಸಂಘರ್ಷ ತಡೆಯುವ ಸಲುವಾಗಿ ಏಪ್ರಿಲ್ ಎರಡನೇ ವಾರದಲ್ಲಿ ಎಲ್ಲ ಧರ್ಮಗಳ ಧರ್ಮಗುರುಗಳ ಸಾನ್ನಿಧ್ಯದಲ್ಲಿ ‘ಭಾವೈಕ್ಯತಾ ಸಮಾವೇಶ’ವನ್ನು ಬೆಂಗಳೂರಿನಲ್ಲಿ ಆಯೋಜಿಸಲು ಪ್ರಗತಿಪರರು, ಸಾಹಿತಿಗಳು ಹಾಗೂ ಚಿಂತಕರು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿಚಾರ, ಕೋಮು ದ್ವೇಷ ಹಾಗೂ ವಿವಿಧ ಗಂಭೀರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕುರಿತು ‘ಸಮನ್ವಯ ವೇದಿಕೆ’ಯು ಪ್ರಗತಿಪರರ ‘ಚಿಂತನಾ ಸಭೆ’ಯನ್ನು ಮಂಗಳವಾರ ಹಮ್ಮಿಕೊಂಡಿತ್ತು.
ಪ್ರಗತಿಪರರು, ಸಾಹಿತಿಗಳು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ‘ಕೋಮುವಾದಿ ಶಕ್ತಿಗಳು ತಮ್ಮ ಕದಂಬ ಬಾಹುಗಳನ್ನು ರಾಜ್ಯದಾದ್ಯಂತ ಹರಡುತ್ತಿವೆ. ರಾಜಕೀಯವಾಗಿ ಈ ವಿಷಯಗಳನ್ನು ಬಳಸಿಕೊಂಡು ಜನರಲ್ಲಿ ದ್ವೇಷ ಬಿತ್ತುವ ಕೆಲಸ ನಡೆಯುತ್ತಿದೆ. ಇದನ್ನು ತುರ್ತಾಗಿ ನಿಯಂತ್ರಣಕ್ಕೆ ತರಬೇಕು. ಈ ಮೂಲಕ ಸಮಾಜದಲ್ಲಿ ಶಾಂತಿ ಕಾಪಾಡುವುದು ಅಗತ್ಯ’ ಎಂದು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದರು.
ಸಾಹಿತಿ ಎಸ್.ಜಿ.ಸಿದ್ದರಾಮಯ್ಯ, ‘ಕೋಮುಶಕ್ತಿಗಳು ಹಾಗೂ ಸಂವಿಧಾನ ವಿರೋಧಿಗಳು ಬಹುತ್ವ ಭಾರತವನ್ನು ಹಾಳು ಮಾಡುತ್ತಿದ್ದಾರೆ. ಜಾತಿ, ಧರ್ಮದ ಆಧಾರದಲ್ಲಿ ದೇಶವನ್ನು ಛಿದ್ರ ಮಾಡಲು ಹೊರಟಿದ್ದಾರೆ. ಇದನ್ನು ತಡೆಯಬೇಕಿರುವುದು ನಮ್ಮ ಕರ್ತವ್ಯ’ ಎಂದರು.
ಪತ್ರಕರ್ತ ಬಿ.ಎಂ.ಹನೀಫ್, ‘ಈಗ ಎದುರಾಗಿರುವ ಸಮಸ್ಯೆಗಳನ್ನು ಧರ್ಮಗಳ ಸಮಸ್ಯೆಯಾಗಿ ನೋಡದೆ, ರಾಜಕೀಯ ಸಮಸ್ಯೆಯಾಗಿ ಎದುರಿಸಬೇಕು. ಇದೊಂದೇ ದಾರಿ’ ಎಂದರು. ಮಹಿಳಾ ಹೋರಾಟಗಾರ್ತಿ ಕೆ.ಎಸ್.ವಿಮಲಾ, ‘ಹಿಜಾಬ್ ವಿಚಾರ ಮುಂದಿಟ್ಟುಕೊಂಡು ಹೆಣ್ಣುಮಕ್ಕಳ ಮೇಲೆ ಅತಿಯಾದ ಶೋಷಣೆ ನಡೆಯುತ್ತಿದೆ. ಇದು, ಮಹಿಳೆಯರನ್ನು ಶಿಕ್ಷಣದಿಂದ ಹೊರಗಿಡುವ ಹುನ್ನಾರ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಎನ್.ಎ.ಹ್ಯಾರಿಸ್, ಕಾಂಗ್ರೆಸ್ ಮುಖಂಡ ಸಿ.ಎಸ್.ದ್ವಾರಕಾನಾಥ್, ‘ಮುಖ್ಯಮಂತ್ರಿ’ ಚಂದ್ರು, ಲೇಖಕಿ ಬಿ.ಟಿ.ಲಲಿತಾ ನಾಯಕ್, ಕೆ.ಇ.ರಾಧಾಕೃಷ್ಣ, ಸಾಮಾಜಿಕ ಕಾರ್ಯಕರ್ತ ಎಚ್.ವಿ. ವಾಸು, ವಿಜ್ಞಾನ ಚಳವಳಿ ಕಾರ್ಯಕರ್ತೆ ಪ್ರಭಾ, ವಕೀಲ ಎನ್.ಅನಂತನಾಯ್ಕ, ಸಮನ್ವಯ ವೇದಿಕೆ ಸಂಚಾಲಕ ಸುಭಾಷ್‌ಚಂದ್ರ ಸೇರಿದಂತೆ ಹಲವರು ಸಭೆಯಲ್ಲಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ