ಮಂಗಳೂರು, ಏ.8: ಇಲ್ಲಿನ ನಗರ ಮಧ್ಯೆ, ವೆನ್ಲಾಕ್ ಆಸ್ಪತ್ರೆಯ ಎದುರುಗಡೆ ಖಾಸಗಿ ಬಸ್ಸೊಂದು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ನಡೆದಿದೆ.
ಸುರತ್ಕಲ್ – ಮಂಗಳೂರು ನಡುವೆ ಸಂಚರಿಸುವ 45 ನಂಬರಿನ ಸಿಟಿ ಬಸ್ಸು ಬೈಕ್ಗೆ ಡಿಕ್ಕಿ ಹೊಡೆದಿದ್ದು, ಬೈಕ್ನ ಪೆಟ್ರೋಲ್ ಟ್ಯಾಂಕ್ ಸಿಡಿದು ಬಸ್ಗೆ ಬೆಂಕಿ ತಗುಲಿದೆ.ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರನ್ನು ಚಾಲಕ ಕೆಳಗಿಳಿಸಿದ್ದಾರೆ.
ತಕ್ಷಣ ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದೆ.ಖಾಸಗಿ ಬಸ್ಸಿನ ಮುಂಭಾಗ ಸಂಪೂರ್ಣ ಭಸ್ಮವಾಗಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.