ನವದೆಹಲಿ: ಭಾರತದಲ್ಲಿ ಕೆಲವು ಸರ್ಕಾರಗಳು, ಪೊಲೀಸರು, ಬಂಧಿಖಾನೆ ಅಧಿಕಾರಿಗಳು ಎಸಗುತ್ತಿರುವ ಮಾನವಹಕ್ಕುಗಳ ಉಲ್ಲಂಘನೆಯನ್ನು ಗಮನಿಸುತ್ತಿದ್ದೇವೆ ಎಂದು ಅಮೆರಿಕದ ಸಚಿವ ಆಂಟೋನಿ ಬ್ಲಿಂಕೆನ್ ಹೇಳಿದ್ದಾರೆ.
ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಅಮೆರಿಕ ಸಚಿವರು 2+2 ಮಾತುಕತೆ ನಡೆದ ಬಳಿಕ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಬ್ಲಿಂಕೆನ್ ಈ ಹೇಳಿಕೆ ನೀಡಿದ್ದಾರೆ.
ಕೆಲವು ಸರ್ಕಾರ, ಪೊಲಿಸರು, ಬಂಧಿಖಾನೆ ಅಧಿಕಾರಿಗಳಿಂದ ಹೆಚ್ಚುತ್ತಿರುವ ಮಾನವಹಕ್ಕುಗಳ ಉಲ್ಲಂಘನೆಯ ಬಗ್ಗೆ ಗಮನಿಸುತ್ತಿದ್ದೇವೆ ಎಂದಷ್ಟೇ ಹೇಳಿದ್ದು, ಬೇರೆ ವಿವರಗಳನ್ನು ಬಹಿರಂಗಪಡಿಸಿಲ್ಲ.
ನಾವು ಮಾನವ ಹಕ್ಕುಗಳನ್ನು ರಕ್ಷಿಸುವುದು ಸೇರಿದಂತೆ ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಬದ್ಧರಾಗಿದ್ದೇವೆ. ಹಂಚಿಕೊಂಡಿರುವ ಮೌಲ್ಯಗಳ ವಿಷಯದಲ್ಲಿ ಭಾರತೀಯರೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತೇವೆ ಎಂದು ಬ್ಲಿಂಕೆನ್ ಹೇಳಿದ್ದಾರೆ.