janadhvani

Kannada Online News Paper

ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಈಶ್ವರಪ್ಪ A1 ಆರೋಪಿ- ಎಫ್ಐಆರ್ ದಾಖಲು

ಐಪಿಸಿ ಸೆಕ್ಷನ್ 306, ಸೆಕ್ಷನ್ 34 ಅಡಿ ಎಫ್​ಐಆರ್ ದಾಖಲಾಗಿದೆ. ಸಚಿವ ಈಶ್ವರಪ್ಪ A1, ಬಸವರಾಜ್ A2, ರಮೇಶ್ A3 ಆರೋಪಿಗಳಾಗಿದ್ದಾರೆ.

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಸೇರಿ ಸಚಿವರ ಆಪ್ತರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಉಡುಪಿ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ FIR ದಾಖಲಾಗಿದ್ದು, ಐಪಿಸಿ ಸೆಕ್ಷನ್ 306, ಸೆಕ್ಷನ್ 34 ಅಡಿ ಎಫ್​ಐಆರ್ ದಾಖಲಾಗಿದೆ. ಸಚಿವ ಈಶ್ವರಪ್ಪ A1, ಬಸವರಾಜ್ A2, ರಮೇಶ್ A3 ಆರೋಪಿಗಳಾಗಿದ್ದಾರೆ.

ಸಂತೋಷ್ ಸೋದರ ಸಂಬಂಧಿ ಪ್ರಶಾಂತ ಪಾಟೀಲ್ ನೀಡಿದ ದೂರಿನ ಅನ್ವಯ ಎಫ್​ಐಆರ್ ದಾಖಲು ಮಾಡಲಾಗಿದೆ. ಸಚಿವ ಈಶ್ವರಪ್ಪ ವಿರುದ್ಧ ಶೇ.40 ಲಂಚಕ್ಕಾಗಿ ಬೇಡಿಕೆ ಇಟ್ಟ ಆರೋಪವನ್ನು ಸಚಿವ ಈಶ್ವರಪ್ಪ ಮತ್ತು ಆಪ್ತರ ವಿರುದ್ಧ ಸಂತೋಷ್ ಮಾಡಿದ್ದರು. ಹಿಂಡಲಗ ಗ್ರಾಮದ ಶ್ರೀಲಕ್ಷ್ಮೀದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಮಾಡಿದ್ದ ರಸ್ತೆ ಕಾಮಗಾರಿಯ 4 ಕೋಟಿ ರೂಪಾಯಿ ಬಿಡುಗಡೆಗೆ ಸಂತೋಷ್ ಮನವಿ ಮಾಡಿ ಬಿಲ್ ಮಂಜೂರು ಮಾಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅನುಮಾನಾಸ್ಪದ ಸಾವು ಇದಾಗಿದ್ದು, ಮೂವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

error: Content is protected !! Not allowed copy content from janadhvani.com