ಬೆಂಗಳೂರು: ವಿಪಕ್ಷಗಳ ತೀವ್ರ ಒತ್ತಾಯ, ಬಿಜೆಪಿ ಹೈಕಮಾಂಡ್ ಬೇಸರ ಹಾಗೂ ಸಿಎಂ ಸಲಹೆ ಮೇರೆಗೆ ಕೊನೆಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಯಾರೆಂದು ನನಗೆ ಗೊತ್ತೇ ಇಲ್ಲ. ಸುಖಾಸುಮ್ಮನೆ ನನ್ನ ಮೇಲೆ ಆರೋಪ ಮಾಡಲಾಗಿದೆ. ಸಂತೋಷ್ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ನಿನ್ನೆ ಈಶ್ವರಪ್ಪ ಖಡಕ್ ಆಗಿ ಹೇಳಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಇಂದು ಸಂಜೆ ತುರ್ತು ಪತ್ರಿಕಾ ಗೋಷ್ಠಿ ನಡೆಸಿ ಶುಕ್ರವಾರ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿತ್ತು. ಗುರುವಾರ ಬೆಳಗ್ಗೆ ಸಿಎಂ ನಿವಾಸಕ್ಕೆ ಕಾಂಗ್ರೆಸ್ ನಾಯಕರು ಮುತ್ತಿಗೆ ಹಾಕುವ ರ್ಯಾಲಿ ಕೂಡ ನಡೆಸಿದ್ದರು.
ಇದೇ ಏ.16, 17 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ದಿನ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಈಶ್ವರಪ್ಪ ಪ್ರಕರಣದಿಂದ ತಮ್ಮ ಭೇಟಿಯ ಸಂದರ್ಭದಲ್ಲಿ ಮುಜುಗರಕ್ಕೆ ಈಡಾಗಬಹುದು ಎಂಬ ಕಾರಣದಿಂದ ರಾಜೀನಾಮೆ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಈಶ್ವರಪ್ಪ ಅವರಿಗೆ ಫೋನ್ ಕರೆ ಮಾಡಿ ತಿಳಿಸಿದ್ದರು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ