janadhvani

Kannada Online News Paper

ಏ.22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ-ಧಾರ್ಮಿಕ ಸೂಚಕ ವಸ್ತ್ರ ಧರಿಸಲು ಅವಕಾಶವಿಲ್ಲ 

ಈ ಬಾರಿ ಒಟ್ಟು 68,42,255 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಇದೇ 22ರಿಂದ ಆರಂಭವಾಗಲಿದ್ದು, ಹಿಜಾಬ್ ಸೇರಿ ಯಾವುದೇ ಧಾರ್ಮಿಕ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಈ ಬಾರಿ ಒಟ್ಟು 68,42,255 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಈ ಹಿಂದಿನ ಅನುಭವಗಳ ಆಧಾರದಲ್ಲಿ ಸೋರಿಕೆ ತಡೆಗೆ ಕ್ರಮ ವಹಿಸಲಾಗಿದೆ. ಅಕ್ರಮ ತಡೆಯಲು 2152 ಜಾಗೃತದಳ, 858 ತಾಲ್ಲೂಕು ಜಾಗೃತ ದಳ ಮತ್ತು 64 ಜಿಲ್ಲಾ ಜಾಗೃತ ದಳ ಕಾರ್ಯ ನಿರ್ವಹಿಸಲಿವೆ.

ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶದಲ್ಲಿ 144ನೇ ಸೆಕ್ಷನ್ ವಿಧಿಸಲಾಗುವುದು ಎಂದು ನಾಗೇಶ್ ಹೇಳಿದರು.

ಕಳೆದ ಎಸ್ಎಸ್ಎಲ್ಸಿ ಪರೀಕ್ಷೆಯ ಸಂಧರ್ಭದಲ್ಲಿ ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿರುವ ಖಾಸಗಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಶಿರವಸ್ತ್ರ ಧರಿಸಲು ಸರ್ಕಾರ ಅನುಮತಿ ನೀಡಿತ್ತು, ದ್ವಿತೀಯ ಪಿಯುಸಿ ಪರೀಕ್ಷೆಯ ಸಂದರ್ಭದಲ್ಲೂ ಆಯಾ ಕಾಲೇಜಿನ ಸಮವಸ್ತ್ರದಂತೆ ಪರೀಕ್ಷಾ ಕೊಠಡಿಗೆ ಪ್ರವೇಶಾನುಮತಿ ನೀಡುವ ಸಾಧ್ಯತೆ ಇದೆ.

error: Content is protected !! Not allowed copy content from janadhvani.com