janadhvani

Kannada Online News Paper

ದೆಹಲಿ: ಬುಲ್ಡೋಜರ್ ರಾಜಕಾರಣಕ್ಕೆ ಸುಪ್ರೀಂಕೋರ್ಟ್ ತಡೆ- ನಾಳೆ ಮತ್ತೆ ವಿಚಾರಣೆ

ಜಹಾಂಗೀರ್ ಪುರಿಯಲ್ಲಿನ ಧ್ವಂಸವನ್ನು ನಿಲ್ಲಿಸುವಂತೆ ಸುಪ್ರೀಂ ಕೋರ್ಟ್‌ನ ಆದೇಶದ ಕುರಿತು ಅರ್ಜಿದಾರರ ವಕೀಲರು ನಾಗರಿಕ ಸಂಸ್ಥೆ, ಪೊಲೀಸರು ಮತ್ತು ದೆಹಲಿ ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ನವದೆಹಲಿ,ಏ.20: ದೆಹಲಿಯ ಹಿಂಸಾಚಾರ ಪೀಡಿತ ಜಹಾಂಗೀರ್ ಪುರಿ ಪ್ರದೇಶಕ್ಕೆ ಆಗಮಿಸಿದ ಉತ್ತರ ನವದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್ ಗೆ (ಎನ್‌ಡಿಎಂಸಿ) ಸೇರಿದ ಬುಲ್ಡೋಜರ್‌ಗಳು ಆ ಪ್ರದೇಶದಲ್ಲಿನ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಈ ಪ್ರದೇಶದಲ್ಲಿನ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ವೇಳೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು 400 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ನಾಗರಿಕ ಸಂಸ್ಥೆ ಕೇಳಿತ್ತು.

ಜಹಾಂಗೀರ್ ಪುರಿ ಧ್ವಂಸ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ನಾಳೆ ಮತ್ತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕರಣದ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಸಮ್ಮತಿಸಿದೆ.

ಜಹಾಂಗೀರ್ ಪುರಿಯಲ್ಲಿನ ಧ್ವಂಸವನ್ನು ನಿಲ್ಲಿಸುವಂತೆ ಸುಪ್ರೀಂ ಕೋರ್ಟ್‌ನ ಆದೇಶದ ಕುರಿತು ಅರ್ಜಿದಾರರ ವಕೀಲರು ನಾಗರಿಕ ಸಂಸ್ಥೆ, ಪೊಲೀಸರು ಮತ್ತು ದೆಹಲಿ ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ನ್ಯಾಯಾಲಯದ ಆದೇಶವನ್ನು ಅಧಿಕಾರಿಗಳು ಪಾಲಿಸುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

error: Content is protected !! Not allowed copy content from janadhvani.com