janadhvani

Kannada Online News Paper

ಹಳೆಯಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲೇ ಸಾವು

ಮೃತರನ್ನು ಮುಕ್ಕ ಪಡ್ರೆ ನಿವಾಸಿಗಳಾದ ಭುಜಂಗ(62) ಹಾಗೂ ವಸಂತ್(55) ಎಂದು ಗುರುತಿಸಲಾಗಿದೆ

ವರದಿ: ಅದ್ದಿ ಬೊಳ್ಳೂರು

ಹಳೆಯಂಗಡಿ,ಏ.22:ಮಾರುತಿ ಓಮ್ನಿ ಕಾರೊಂದು ಎಕ್ಸ್ಪ್ರೆಸ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ತಡರಾತ್ರಿ ಸುಮಾರು ಹನ್ನೊಂದು ಗಂಟೆಯ ವೇಳೆ ಹಳೆಯಂಗಡಿಯ ಪಾವಂಜೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ, ಮೃತರನ್ನು ಮುಕ್ಕ ಪಡ್ರೆ ನಿವಾಸಿಗಳಾದ ಭುಜಂಗ(62) ಹಾಗೂ ವಸಂತ್(55) ಎಂದು ಗುರುತಿಸಲಾಗಿದ್ದು. ಕಾರು ಚಾಲಕ ಬಾಲಕೃಷ್ಣ ಸಹ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಓಮ್ನಿ ಕಾರು ಹಳೆಯಂಗಡಿ ಒಳ ರಸ್ತೆಯಿಂದ ಪಾವಂಜೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವಾಗ ಮಂಗಳೂರಿನಿಂದ ಬರುತ್ತಿದ್ದ ಎಕ್ಸ್ಪ್ರೆಸ್ ಬಸ್ಸಿಗೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮಂಗಳೂರು ಉತ್ತರ ವಲಯದ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ ನಿಯಂತ್ರಿಸಿದ್ದಾರೆ.