janadhvani

Kannada Online News Paper

ಕೋವಿಡ್ 4ನೇ ಅಲೆ: ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಏ.27 ರಂದು ಪ್ರಧಾನಿ ಸಂವಾದ

ಹುಬ್ಬಳ್ಳಿ: ಏಪ್ರಿಲ್ 24: ಏಪ್ರಿಲ್ 27 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಪ್ರಧಾನಮಂತ್ರಿಗಳು 27 ರಂದು ವಿಡಿಯೋ ಕಾನ್ಫರೆನ್ಸ್ ಕರೆದಿದ್ದಾರೆ ಎಂದರು.

ಹುಬ್ಬಳ್ಳಿಯ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೋವಿಡ್ ಬಗ್ಗೆ ಜಾಗೃತರಾಗಿರುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆಯನ್ನು ಕೊಟ್ಟಿದೆ. ಕಳೆದ 8-10 ದಿನಗಳಿಂದ ಅಲ್ಪಮಟ್ಟದ ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕಂಡುಬಂದಿದೆ. ಮೂರು ಅಲೆಗಳನ್ನು ನಿಭಾಯಿಸಿರುವ ಅನುಭವದಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ ಎನ್ನುವ ಮಾತನ್ನು ಪರಿಣಿತರು ಹೇಳಿದ್ದಾರೆ.

ಈಗಾಗಲೇ ಆರೋಗ್ಯ ಸಚಿವರೂ ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಎಪ್ರಿಲ್ 27 ರಂದು ಪ್ರಧಾನ ಮಂತ್ರಿಗಳ ವೀಡಿಯೋ ಸಂವಾದದ ನಂತರ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಸ್ಪಷ್ಟ ಸೂಚನೆಗಳನ್ನು ನೀಡುತ್ತೇವೆ ಎಂದರು.

error: Content is protected !! Not allowed copy content from janadhvani.com