ಮನಾಮ: ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿ ವತಿಯಿಂದ ಬೃಹತ್ ಇಫ್ತಾರ್ ಸಂಗಮವು ದಿನಾಂಕ 22-04-2022 ರಂದು ಪಾಕಿಸ್ತಾನ್ ಕ್ಲಬ್ ಮೈದಾನದಲ್ಲಿ ಬಹಳ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಭಾರತದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರು ಮುಖ್ಯ ಅತಿಥಿಯಾಗಿ ಆಗಮಿಸಿ ದುವಾಶೀರ್ವಚನ ಮಾಡಿದರು. ಸಂಜೆ 4-30 ಕ್ಕೆ ಬದ್ರ್ ಮೌಲಿದ್ ನೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಹಾಫಿಳ್ ದರ್ವೇಶ್ ಮುಹಮ್ಮದ್ ಅಲಿ ಖಿರಾಅತ್ ಪಾರಾಯಣ ಮಾಡಿದರು.
ರಾಷ್ಟ್ರಿಯ ಸಮಿತಿ ಅಧ್ಯಕ್ಷರಾದ ವಿಟ್ಲ ಜಮಾಲುದ್ದೀನ್ ರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯರವರು ನೆರೆದವರಿಗೆ ಸ್ವಾಗತ ಕೋರಿದರು.

ಸಮಾರಂಭದಲ್ಲಿ ಕರ್ನಾಟಕ ಜಂಇಯ್ಯತುಲ್ ಉಲಮಾ ಸದಸ್ಯರಾದ ಜಿ.ಎಂ ಮುಹಮ್ಮದ್ ಕಾಮಿಲ್ ಸಖಾಫಿ, ಯುವ ವಾಗ್ಮಿ ಮರ್ಝೂಕ್ ಸಅದಿ, ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಸಾಂತ್ವನ ಇಲಾಖೆಯ ಅಧ್ಯಕ್ಷರಾದ ಅಲಿ ಮುಸ್ಲಿಯಾರ್, ಫೆಲೆಸ್ತೀನ್ ರಾಯಭಾರಿ ಅಬ್ದುಲ್ ಖಾದರ್ ತಾಹ, ಐಸಿಎಫ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಸಿ.ಕರೀಂ ಸಾಹೇಬ್, ಇಫ್ತಾರ್ ಸಮಿತಿ ಚೈರ್ಮ್ಯಾನ್ ಬಶೀರ್ ಕಾರ್ಲೆ, ಕನ್ವೀನರ್ ಅಬ್ದುಲ್ ಮಜೀದ್ ಝುಹುರಿ ಹಾಗೂ ವಿವಿಧ ಸಾಮಾಜಿಕ, ಧಾರ್ಮಿಕ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರಿಯ ಸಮಿತಿ ಸಂಘಟನಾ ಇಲಾಖೆಯ ಅಧ್ಯಕ್ಷರಾದ ಕಲಂದರ್ ಮುಸ್ಲಿಯಾರ್ ಕಕ್ಕೆಪದವುರವರು ನಿರೂಪಿಸಿದ ಕಾರ್ಯಕ್ರಮಕ್ಕೆ ಪ್ರಕಾಶನ ಇಲಾಖೆಯ ಅಧ್ಯಕ್ಷರಾದ ಲತೀಫ್ ಪೇರೋಲಿ ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ