ಬೆಂಗಳೂರು,ಏ.27: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿ ಹಾಗೂ ಪ್ರಮುಖ ಸಚಿವರ ಜೊತೆ ಮಹತ್ವದ ಮಾತುಕತೆ ನಡೆಸಿದರು.
ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ.. ರಾಜ್ಯದಲ್ಲಿ ಸದ್ಯಕ್ಕೆ ಟಫ್ ರೂಲ್ಸ್ ಜಾರಿಯಿಲ್ಲ. ಅನವಶ್ಯಕವಾಗಿ ಯಾವುದೇ ನಿರ್ಬಂಧ ಹೇರಿಕೆ ಬೇಡ. ಅಗತ್ಯವಿರುವೆಡೆ ನಿರ್ಬಂಧ ಹೇರಿಕೆ ಅಗತ್ಯ ಎಂದು ಮೋದಿ ತಿಳಿಸಿದ್ದಾರೆ. ಲಸಿಕೆ ನೀಡಲು ಶಾಲೆಗಳಲ್ಲಿ ಅಭಿಯಾನ ಮಾಡುತ್ತೇವೆ. ಟೆಸ್ಟ್, ಟ್ರೀಟ್, ಟ್ರ್ಯಾಕ್, ಲಸಿಕೆ ಅನುಸರಿಸಲು ಹೇಳಿದ್ದಾರೆ ಎಂದು ತಿಳಿಸಿದರು.
ನಾಲ್ಕು ಸೂತ್ರಗಳನ್ನು ಅನುಸರಿಸಲು ಮೋದಿ ಹೇಳಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಹೇಳಿದ್ದಾರೆ. ವ್ಯಾಕ್ಸಿನೇಷನ್ ವೇಗ ಹೆಚ್ಚಿಸಲು ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಜೀವನ ನಡೆಸಬೇಕು. ಏರ್‌ಪೋರ್ಟ್‌ಗಳಲ್ಲಿ ಟೆಸ್ಟಿಂಗ್ ಹೆಚ್ಚಳ ಮಾಡುತ್ತೇವೆ ಎಂದು ತಿಳಿಸಿದರು.
ರಾಜ್ಯದ ಕೆಲವು ಮಾಧ್ಯಮಗಳು ಮುಸ್ಲಿಮರ ಹಬ್ಬವನ್ನು ಟಾರ್ಗೆಟ್ ಮಾಡಿ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣವನ್ನು ಜಾರಿಗೆ ತರುತ್ತಿದೆ ಎಂದು ಜನರು ಭಾವಿಸುವ ರೂಪದಲ್ಲಿ ಪ್ರಚಾರ ಪಡಿಸಿ, ಮುಸ್ಲಿಮರ ರಂಜಾನ್ ಹಬ್ಬಾಚರಣೆಗೆ ಮಸೀದಿಗಳಲ್ಲಿ ಅವಕಾಶವಿಲ್ಲ ಎಂಬಿತ್ಯಾದಿ ಊಹಾಪೋಹಗಳನ್ನು ಬಿತ್ತರಿಸಿ ವಿಕೃತ ಆನಂದ ಪಡುತ್ತಿದ್ದ ಮತಾಂಧ ಟಿವಿ ಮಾಧ್ಯಮದವರಿಗೆ ಸಿ.ಎಂ. ಹೇಳಿಕೆಯು ನಿರಾಸೆಯನ್ನು ತಂದಿದೆ.


















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ