ಮಂಗಳೂರು,ಮೇ.1|ಇಂದು ಶವ್ವಾಲ್ ತಿಂಗಳ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ನಾಳೆ (ಮೇ.2) ರಮಳಾನ್ 30 ಆಗಿದ್ದು, ಮಂಗಳವಾರ ಮೇ. 3 ರಂದು ಶವ್ವಾಲ್ ಒಂದು ಅಥವಾ ಈದುಲ್ ಫಿತರ್ ಆಚರಿಸಲಾಗುವುದು ಎಂದು ಉಳ್ಳಾಲ ಸಹಿತ ದ.ಕ ಜಿಲ್ಲೆಯ ನೂರಾರು ಮೊಹಲ್ಲಾಗಳ ಗೌರವಾನ್ವಿತ ಖಾಝಿ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಗಳ್ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.
ನಾಳೆ ರಂಳಾನ್ 30 ಪೂರ್ತೀಕರಿಸಿ ಮೇ.3 ರಂದು ಈದುಲ್ ಫಿತರ್ ಆಚರಿಸುವಂತೆ ಮಂಗಳೂರು ಹಾಗೂ ದ.ಕ.ಜಿಲ್ಲಾ ಸಂಯುಕ್ತ ಖಾಝಿಗಳಾದ ಗೌರವಾನ್ವಿತ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹಾಗೂ ಉಡುಪಿ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿಗಳಾದ ಝೈನುಲ್ ಉಲಮಾ ಮಾಣಿ ಉಸ್ತಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪವಿತ್ರ ರಮಳಾನ್ ಮುಸಲ್ಮಾನರ ಮಟ್ಟಿಗೆ ಅತ್ಯಂತ ಪವಿತ್ರವಾದ ತಿಂಗಳಾಗಿದೆ. ಈ ತಿಂಗಳಿನಲ್ಲಿ ಕಠಿಣ ವೃತವನ್ನು ಆಚರಿಸಿ, ಅಲ್ಲಾಹನ ಇಷ್ಟ ದಾಸರ ಸಾಲಿನಲ್ಲಿ ಸೇರುವ ಉದ್ದೇಶದಿಂದ ಎಲ್ಲಾ ವಿಧ ಕೆಡುಕುಗಳಿಂದಲೂ ದೂರ ಸರಿದು ಹೆಚ್ಚೆಚ್ಚು ಒಳಿತನ್ನು ಮಾಡುತ್ತಾ ಉತ್ತಮ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳಲು ಶ್ರಮಿಸುತ್ತಾರೆ.
ರಮಳಾನ್ ತಿಂಗಳ ಕಡ್ಡಾಯ ವೃತವನ್ನು ಕೊನೆಗೊಳಿಸುವ ದಿನದಂದು ಈದುಲ್ ಫಿತರ್ ಹಬ್ಬವನ್ನು ಆಚರಿಸಲಾಗುತ್ತದೆ. ರಮಳಾನ್ 29 ನೇ ಉಪವಾಸ ತೊರೆದ ಬಳಿಕ ಶವ್ವಾಲ್ ಚಂದ್ರ ದರ್ಶನವಾದಲ್ಲಿ ಮರುದಿನ ಈದ್ ಆಚರಿಸಲಾಗುತ್ತದೆ. ಚಂದ್ರ ದರ್ಶನವಾಗದಿದ್ದಲ್ಲಿ ರಮಳಾನ್ 30 ಪೂರ್ತೀಕರಿಸಿದ ನಂತರ ಈದ್ ಆಚರಿಸಲಾಗುತ್ತದೆ.
ಈದ್ ದಿನದಂದು ಯಾವೊಬ್ಬನೂ ಹಸಿವಿನಿಂದ ಇರಕೂಡದು ಎಂಬ ಉದ್ದೇಶದಿಂದ,ಆ ದಿನದಲ್ಲಿ ಫಿತರ್ ಝಕಾತ್ ಸಂಪ್ರದಾಯವನ್ನು ಕಡ್ಡಾಯಗೊಳಿಸಲಾಗಿದೆ. ಊರಿನಲ್ಲಿ ಸಾಮಾನ್ಯವಾಗಿ ಸೇವಿಸಲ್ಪಡುವ ಅಕ್ಕಿ, ಗೋಧಿ, ರಾಗಿ ಎಂಬಿತ್ಯಾದಿ ಧಾನ್ಯಗಳನ್ನು ನಿರ್ದಿಷ್ಟ ಅಳತೆಯಲ್ಲಿ ಝಕಾತ್ ರೂಪದಲ್ಲಿ ನೀಡಬೇಕು.
ಈದ್ ಎಂಬುದು ಪರಸ್ಪರ ಸ್ನೇಹ, ಸಹಬಾಳ್ವೆ ಸೌಹಾರ್ಧತೆಯನ್ನು ಸಾರುವ ಸಂಕೇತವಾಗಿದೆ.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್