ರಿಯಾದ್: ಸೌದಿ ಪ್ರಜೆಗಳು ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ಸೌದಿ ಅರೇಬಿಯಾ ನಿಷೇಧಿಸಿದೆ. ಈ ದೇಶಗಳಲ್ಲಿನ ಕೋವಿಡ್ ಪರಿಸ್ಥಿತಿಯನ್ನು ನಿರ್ಣಯಿಸಿದ ನಂತರ ನಿಷೇಧವನ್ನು ವಿಧಿಸಲಾಗಿದೆ.
ಪಾಸ್‌ಪೋರ್ಟ್‌ಗಳ ನಿರ್ದೇಶನಾಲಯ (ಜವಾಝಾತ್) ಶನಿವಾರ ಈ ಕುರಿತು ಪ್ರಕಟಣೆ ಹೊರಡಿಸಿದೆ. ಸೌದಿ ಪ್ರಜೆಗಳು ಭಾರತ, ಲೆಬನಾನ್, ಸಿರಿಯಾ, ಟರ್ಕಿ, ಇರಾನ್, ಅಫ್ಘಾನಿಸ್ತಾನ, ಯೆಮೆನ್, ಸೊಮಾಲಿಯಾ, ಇಥಿಯೋಪಿಯಾ, ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ, ಲಿಬಿಯಾ, ಇಂಡೋನೇಷಿಯಾ, ವಿಯೆಟ್ನಾಂ, ಅರ್ಮೇನಿಯಾ, ಬೆಲಾರಸ್ ಮತ್ತು ವೆನೆಜುವೆಲಾಗಳಿಗೆ ಪ್ರಯಾಣಿಸುವುದನ್ನು ನಿರ್ಬಂಧಿಸಲಾಗಿದೆ.
ಈ ದೇಶಗಳಲ್ಲಿ ಕಳೆದ ಕೆಲವು ವಾರಗಳಲ್ಲಿ ಪ್ರತಿದಿನ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ನಿಷೇಧ ಹೇರಲಾಗಿದೆ. ಆದಾಗ್ಯೂ, ಸೌದಿ ಅರೇಬಿಯಾದಲ್ಲಿ ಮಂಗನ ಕಾಯಿಲೆಯ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.